ADVERTISEMENT

DGP ಪದೋನ್ನತಿ: ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ ತಡೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2025, 19:45 IST
Last Updated 18 ಸೆಪ್ಟೆಂಬರ್ 2025, 19:45 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಐಪಿಎಸ್‌ ಅಧಿಕಾರಿಗಳಾದ ಉಮೇಶ್‌ ಕುಮಾರ್ ಮತ್ತು ಅರುಣ್‌ ಚಕ್ರವರ್ತಿ ಅವರಿಗೆ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರ (ಡಿಜಿಪಿ) ಹುದ್ದೆಗೆ ಪದೋನ್ನತಿ ನೀಡಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಮಧ್ಯಂತರ ತಡೆ ನೀಡಿದೆ.

ಅಧಿಸೂಚನೆ ರದ್ದುಪಡಿಸುವಂತೆ ಕೋರಿ ರಾಜ್ಯ ಪೊಲೀಸ್‌ ತರಬೇತಿ ಕೇಂದ್ರದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಅಲೋಕ್‌ ಕುಮಾರ್‌ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್‌.ಸುಜಾತ ಮತ್ತು ಆಡಳಿತಾತ್ಮಕ ಸದಸ್ಯ ಸಂಜೀವ್‌ ಕುಮಾರ್‌ ಅವರಿದ್ದ ವಿಭಾಗೀಯ ಪೀಠ ಗುರುವಾರ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.

ADVERTISEMENT

ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ನೋಟಿಸ್‌, ಉಮೇಶ್‌ ಕುಮಾರ್ ಮತ್ತು ಅರುಣ್‌ ಚಕ್ರವರ್ತಿಗೆ ತುರ್ತು ನೋಟಿಸ್‌ ಜಾರಿಗೊಳಿಸಲು ಆದೇಶಿಸಲಾಗಿದ್ದು ವಿಚಾರಣೆಯನ್ನು ಇದೇ 23ಕ್ಕೆ ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.