
ರಾಮಚಂದ್ರ ರಾವ್, ಎಸ್.ಸುರೇಶ್ ಕುಮಾರ್
ಬೆಂಗಳೂರು: ‘ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಘನಕಾರ್ಯದ ದೃಶ್ಯಾವಳಿಗಳು ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇಡೀ ಪೊಲೀಸ್ ಇಲಾಖೆಗೆ ಕಳಂಕ ಮೆತ್ತುವ ಕೆಲಸ ಮಾಡಿದ್ದು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಒತ್ತಾಯಿಸಿದ್ದಾರೆ.
‘ರಾಮಚಂದ್ರರಾವ್ ಕಚೇರಿಯಲ್ಲಿ ಈ ಕೃತ್ಯ ನಡೆದಾಗ ಅವರ ಹಿಂದೆ ರಾಷ್ಟ್ರಧ್ವಜವೂ ಕಾಣುತ್ತಿದೆ. ಅಧಿಕಾರಿಯ ಈ ಕೃತ್ಯ ರಾಷ್ಟ್ರಧ್ವಜಕ್ಕೂ ಸಂದಿರುವ ಅಗೌರವ ಮತ್ತು ಅಪಚಾರ’ ಎಂದು ಅವರು ತಿಳಿಸಿದ್ದಾರೆ.
‘ಈ ಹಿಂದೆ ಅಪಾರ ಪ್ರಮಾಣದ ಚಿನ್ನದ ಕಳ್ಳಸಾಗಣೆ ನಡೆದಿದ್ದಾಗ ಈ ಅಧಿಕಾರಿಯನ್ನು ಕಡ್ಡಾಯ ರಜೆಯ ಮೇಲೆ ಕಳಿಸಿ ಸರ್ಕಾರ ಕೈತೊಳೆದುಕೊಂಡಿತ್ತು. ಈಗಲೂ ಅದೇ ರೀತಿ ಕಡ್ಡಾಯ ರಜೆ ಮೇಲೆ ಕಳಿಸಿ ಕೈತೊಳೆದುಕೊಳ್ಳುವುದು ಸರ್ಕಾರಕ್ಕೆ ಭೂಷಣವಲ್ಲ. ಸಮವಸ್ತ್ರದಲ್ಲಿಯೇ ತನ್ನ ಕಚೇರಿಯಲ್ಲಿಯೇ ಈ ಹಿರಿಯ ಅಧಿಕಾರಿ ಮಾಡಿರುವ ಕೃತ್ಯ ಪೊಲೀಸ್ ಇಲಾಖೆಯನ್ನೇ ಸಂಶಯದಿಂದ ಮತ್ತು ಅನುಮಾನದಿಂದ ನೋಡುವಂತೆ ಮಾಡಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.