
ಕೆ.ರಾಮಚಂದ್ರ ರಾವ್
ಬೆಂಗಳೂರು: ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿರುವ ಬೆನ್ನಲ್ಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿ ಕೆ. ರಾಮಚಂದ್ರ ರಾವ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈಗಾಗಲೇ ಈ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತಾಧಿಕಾರಿಗಳಿಗೆ ಸೂಚಿಸಿದ್ದಾರೆ.
ರಾಮಚಂದ್ರ ರಾವ್ ಅವರ ವಿಚಾರಣೆ ನಡೆಸಿ ಅವರು ತಪ್ಪು ಎಸಗಿರುವುದು ಸಾಬೀತಾದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.
ಮತ್ತೊಂದೆಡೆ ತಮ್ಮ ಮೇಲಿನ ಆರೋಪಗಳನ್ನು ರಾಮಚಂದ್ರ ರಾವ್ ನಿರಾಕರಿಸಿದ್ದರು. ನನ್ನ ವೃತ್ತಿಜೀವನಕ್ಕೆ ಕಪ್ಪುಚುಕ್ಕೆ ಹಚ್ಚಲು ಷಡ್ಯಂತ್ರ ರೂಪಿಸಲಾಗಿದೆ. ಎಐ ತಂತ್ರಜ್ಞಾನ ಬಳಸಿ ಮಾಡಿದ ವಿಡಿಯೊ ಅಥವಾ ಎಡಿಟ್ ಮಾಡಿರುವ ವಿಡಿಯೊ ಇದಾಗಿದೆ ಎಂದು ಹೇಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.