ADVERTISEMENT

ಸ್ವಾತಂತ್ರ್ಯ ಹೋರಾಟಗಾರ ಎಂ.ಕೆಂಚಯ್ಯ ನಿಧನ

​ಪ್ರಜಾವಾಣಿ ವಾರ್ತೆ
Published 7 ಮೇ 2019, 19:07 IST
Last Updated 7 ಮೇ 2019, 19:07 IST
ಎಂ.ಕೆಂಚಯ್ಯ
ಎಂ.ಕೆಂಚಯ್ಯ   

ಧರ್ಮಪುರ: ಸಮೀಪದ ಹರಿಯಬ್ಬೆ ನಿವಾಸಿ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಎಂ.ಕೆಂಚಯ್ಯ (95) ಮಂಗಳವಾರ ನಿಧನರಾದರು.

ಮೃತರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ.

ವಿದ್ಯಾರ್ಥಿಯಾಗಿದ್ದಾಗಲೇ ಹೋರಾಟಕ್ಕೆ ಧುಮುಕಿದ್ದ ಇವರು, ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳಿಗೆ ಮನಸೋತಿದ್ದರು. 1942ರ ‘ಬ್ರಿಟಿಷರೇ... ಭಾರತ ಬಿಟ್ಟು ತೊಲಗಿ’ ಚಳವಳಿಯಲ್ಲಿ ಭಾಗವಹಿಸಿ ಬಂಧನಕ್ಕೊಳಗಾಗಿ, ಮಧುಗಿರಿ ಜೈಲಿನಲ್ಲಿ ನಾಲ್ಕು ತಿಂಗಳು ಸೆರೆಮನೆವಾಸ ಅನುಭವಿಸಿದ್ದರು.

ADVERTISEMENT

ಸ್ವಾತಂತ್ರ್ಯಾ ನಂತರ ಮೈಸೂರು ಚಲೋ ಚಳವಳಿಯಲ್ಲೂ ಭಾಗವಹಿಸಿದ್ದರು. ನಂತರ ಸರ್ಕಾರಿ ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಆದರ್ಶ ಮತ್ತು ಉತ್ತಮ ಶಿಕ್ಷಕ ಎಂಬ ಹೆಗ್ಗಳಿಕೆ ಅವರದಾಗಿತ್ತು. ಅಂತ್ಯಕ್ರಿಯೆಯು ಹರಿಯಬ್ಬೆಯಲ್ಲಿ ಬುಧವಾರ ಬೆಳಿಗ್ಗೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.