ADVERTISEMENT

ಧರ್ಮಸ್ಥಳ ಅಸಹಜ ಸಾವು ಪ್ರಕರಣ: ಬೆಳ್ತಂಗಡಿಯಲ್ಲಿ ಕಚೇರಿ ತೆರೆದ ಎಸ್‌ಐಟಿ

​ಪ್ರಜಾವಾಣಿ ವಾರ್ತೆ
Published 25 ಜುಲೈ 2025, 8:21 IST
Last Updated 25 ಜುಲೈ 2025, 8:21 IST
   

ಬೆಂಗಳೂರು: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ‌ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡವು ಧರ್ಮಸ್ಥಳದತ್ತ ಹೊರಟಿದೆ. ಶುಕ್ರವಾರ ಮಧ್ಯಾಹ್ನ ಬೆಂಗಳೂರಿನಿಂದ ಧರ್ಮಸ್ಥಳದತ್ತ ತಂಡವು ಪ್ರಯಾಣ ಆರಂಭಿಸಿತು ಎಂಬುದು ಗೊತ್ತಾಗಿದೆ.

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮೊಹಾಂತಿ ನೇತೃತ್ವದಲ್ಲಿ ತಂಡ ರಚಿಸಲಾಗಿದೆ. ಸದ್ಯ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಅವರ ನೇತೃತ್ವದಲ್ಲಿ ತಂಡವು ದಕ್ಷಿಣ ಕನ್ನಡಕ್ಕೆ ತೆರಳಿದೆ‌. ಎಸ್‌ಪಿ ಜಿತೇಂದ್ರ ಕುಮಾರ್ ದಯಾಮ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳರು ಭಾಗದ ಅಧಿಕಾರಿಗಳು ಇಂದು ಸಂಜೆ ಅಥವಾ ನಾಳೆ ಬೆಳಿಗ್ಗೆ ಬೆಳ್ತಂಗಡಿಗೆ ಬರುವ ಸಾಧ್ಯತೆ ಇದೆ. ಬೆಳ್ತಂಗಡಿಯಲ್ಲಿ ಎಸ್‌ಐಟಿ ಕಚೇರಿ ತೆರೆಯಲಾಗಿದೆ‌. ಅಲ್ಲಿ ಕಂಪ್ಯೂಟರ್ ಸೇರಿದಂತೆ ತನಿಖೆಗೆ ಅನುಕೂಲವಾಗುವ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದಕ್ಕೂ ಮುನ್ನ ಸಿಐಡಿ ಕಚೇರಿಯಲ್ಲಿ ಸಭೆ ನಡೆಸಿ ತನಿಖೆಯ ರೂಪರೇಷೆಗಳನ್ನು ಸಿದ್ಧ ಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.