ADVERTISEMENT

ಧರ್ಮಸ್ಥಳ ಪ್ರಕರಣ | ಮುಸ್ಲಿಮರ ಆರೋಪ, ಕೇರಳ ಸರ್ಕಾರದ ಬೆಂಬಲ: ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 28 ಜುಲೈ 2025, 10:58 IST
Last Updated 28 ಜುಲೈ 2025, 10:58 IST
<div class="paragraphs"><p> ಆರ್‌. ಅಶೋಕ</p></div>

ಆರ್‌. ಅಶೋಕ

   

ಮೈಸೂರು: ‘ಧರ್ಮಸ್ಥಳ ಪ್ರಕರಣದಲ್ಲಿ ಆರೋಪ ಮಾಡುತ್ತಿರುವುದು ಮುಸ್ಲಿಂ. ಇದಕ್ಕೆ ಬೆಂಬಲ ಕೊಡುತ್ತಿರುವುದು ಕೇರಳ ಸರ್ಕಾರ’ ಎಂದು ವಿಧಾನಸಭೆಯ ವಿರೋಧಪಕ್ಷದ ನಾಯಕ ಆರ್. ಅಶೋಕ ಪ್ರತಿಕ್ರಿಯಿಸಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಎಸ್ಐಟಿ ರಚಿಸಿರುವುದನ್ನು ಧರ್ಮಸ್ಥಳದವರೂ ಸ್ವಾಗತಿಸಿದ್ದಾರೆ. ನಾನೂ ಸ್ವಾಗತಿಸುತ್ತೇನೆ. ತನಿಖೆ ನಡೆಯಲಿ. ತಪ್ಪಿತಸ್ಥರು ಯಾರಿದ್ದಾರೆ ಎಂಬುದು ಗೊತ್ತಾಗಲಿ. ಸತ್ಯಾಂಶ ಹೊರಬರಲಿ’ ಎಂದರು.

ADVERTISEMENT

‘ಧರ್ಮಸ್ಥಳ ಮಂಜುನಾಥನಿಗೂ ಇದಕ್ಕೂ ಸಂಬಂಧವಿಲ್ಲ. ಇದರ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಲಿ. ಇದೂ ಪಿತೂರಿಯ ಒಂದು ಭಾಗ. ಎಷ್ಟು ಬುರುಡೆಗಳು ಬರುತ್ತವೆ ಗೊತ್ತಾಗಲಿ ಆಮೇಲೆ ಎಲ್ಲವೂ ಗೊತ್ತಾಗುತ್ತದೆ’ ಎಂದು ಪ್ರತಿಕ್ರಿಯಿಸಿದರು.

ಮೃತದೇಹಗಳ ಹೂತಿಟ್ಟ ಜಾಗವನ್ನು ತೋರಿಸಿದ ಸಾಕ್ಷಿ ದೂರುದಾರ

ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತುಹಾಕಿದ ಪ್ರಕರಣದ (ಸಂಖ್ಯೆ 39/2025 ) ಸಾಕ್ಷಿ ದೂರುದಾರ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಸಮೀಪದಲ್ಲಿ ಮೃತದೇಹಗಳನ್ನು ಹೂತು ಹಾಕಿದ ಜಾಗವನ್ನು ವಿಶೇಷ ತನಿಖಾ‌ ತಂಡದ (ಎಸ್ಐಟಿ) ಅಧಿಕಾರಿಗಳಿಗೆ ಸೋಮವಾರ ತೋರಿಸಿದರು.

ಮುಖಕ್ಕೆ‌ಮುಸುಕು ಹಾಕಿದ್ದ ಸಾಕ್ಷಿ ದೂರುದಾರನನ್ನು ಬಿಗು ಪೋಲೀಸ್ ಭದ್ರತೆಯೊಂದಿಗೆ ಎಸ್ಐಟಿ ಅಧಿಕಾರಿಗಳು ನೇತ್ರಾವತಿ ಸ್ನಾನ ಘಟ್ಟದ ಬಳಿಗೆ ಕರೆತಂದರು. ನೇತ್ರಾವತಿ ನದಿ ಪಕ್ಕದಲ್ಲೇ ಇರುವ ಕಾಡಿನೊಳಗೆ ಎಸ್ಐಟಿ ಅಧಿಕಾರಿಗಳನ್ನು ಸಾಕ್ಷಿ ದೂರುದಾರ ಕರೆದೊಯ್ದು. ಆತನ ಜೊತೆಗೆ ಮೂವರು ವಕೀಲರೂ ಸ್ಥಳಕ್ಕೆ ತೆರಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.