ADVERTISEMENT

ಧರ್ಮಸ್ಥಳ ಪ್ರಕರಣ; ನಿಷ್ಪಕ್ಷಪಾತ ತನಿಖೆ ನಡೆಯಲಿ: ಜಾಗೃತ ನಾಗರಿಕರು ಕರ್ನಾಟಕ ಪತ್ರ

​ಪ್ರಜಾವಾಣಿ ವಾರ್ತೆ
Published 20 ಜುಲೈ 2025, 14:46 IST
Last Updated 20 ಜುಲೈ 2025, 14:46 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಬೆಂಗಳೂರು: ‘ಧರ್ಮಸ್ಥಳದ ಸುತ್ತಮುತ್ತ ನಡೆದಿದೆ ಎನ್ನಲಾದ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಗಳ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿರುವುದು ಸ್ವಾಗತಾರ್ಹ. ಎಸ್‌ಐಟಿಯು ನಿಷ್ಪಕ್ಷಪಾತ ತನಿಖೆ ನಡೆಸಿ, ಸತ್ಯವನ್ನು ಪತ್ತೆಮಾಡಬೇಕು’ ಎಂದು ‘ಜಾಗೃತ ನಾಗರಿಕರು ಕರ್ನಾಟಕ’ವು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.

‘ಹಲವು ವರ್ಷಗಳ ಹಿಂದಿನ ಪ್ರಕರಣಗಳು ಇವಾಗಿರುವುದರಿಂದ ಕೂಲಂಕಷ ತನಿಖೆ ನಡೆಯಬೇಕಿದೆ. ಈ ಪ್ರಕರಣಗಳ ಬೆನ್ನು ‌ಹತ್ತಿ ಹೋರಾಟ ಮತ್ತು ಪ್ರತಿಭಟನೆಗಳನ್ನು ಮಾಡಿದ ಸಂಘ, ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಾಲವಿಳಂಬವಿಲ್ಲದೇ ತನಿಖೆ ನಡೆಸಬೇಕು’ ಎಂದು ಆ ಪತ್ರದಲ್ಲಿ ಒತ್ತಾಯಿಸಲಾಗಿದೆ.

ADVERTISEMENT

‘ಸೌಜನ್ಯ ಪ್ರಕರಣದಲ್ಲಿ, ಪ್ರಾಥಮಿಕ ಹಂತದಲ್ಲೇ ತನಿಖೆಯ ದಾರಿ ತಪ್ಪಿಸಲಾಗಿದೆ ಮತ್ತು ಸಾಕ್ಷ್ಯ ನಾಶ ಮಾಡಲಾಗಿದೆ ಎಂದು ನ್ಯಾಯಾಲಯವು ತೀರ್ಪಿನಲ್ಲಿ ಹೇಳಿದೆ. ಅದಕ್ಕೆ ಕಾರಣರಾದ ತನಿಖಾಧಿಕಾರಿಗಳನ್ನೂ ತೀವ್ರ ವಿಚಾರಣೆಗೆ ಒಳಪಡಿಸಬೇಕು’ ಎಂದು ಆಗ್ರಹಿಸಲಾಗಿದೆ.

ಸಾಹಿತಿಗಳು ಮತ್ತು ಸಾಮಾಜಿಕ ಹೋರಾಟಗಾರರಾದ ಕೆ.ಮರುಳಸಿದ್ದಪ್ಪ, ಜಿ.ರಾಮಕೃಷ್ಣ, ಡಾ.ವಿಜಯಾ, ಪ್ರೊ.ಎಸ್.ಜಿ.ಸಿದ್ದರಾಮಯ್ಯ, ವಿಮಲಾ.ಕೆ.ಎಸ್., ವಸುಂಧರಾ ಭೂಪತಿ, ಜಾಣಗೆರೆ ವೆಂಕಟರಾಮಯ್ಯ, ಬಂಜಗೆರೆ ಜಯಪ್ರಕಾಶ್ ಸೇರಿ ಹಲವರು ಪತ್ರಕ್ಕೆ ಸಹಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.