ಬೆಂಗಳೂರು: ಧರ್ಮಸ್ಥಳ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸುವ ಅಗತ್ಯವಿಲ್ಲ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.
'ರಾಜ್ಯ ಸರ್ಕಾರ ನೇಮಿಸಿದ ವಿಶೇಷ ತನಿಖಾ ತಂಡಕ್ಕೆ ತನಿಖೆಯಲ್ಲಿ ಏನೂ ಸಿಕ್ಕಿಲ್ಲ. ಎಲ್ಲಾ ಮುಗಿದ ಮೇಲೆ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಏನು ಮಾಡುತ್ತಾರೆ. ಸುಖಾಸುಮ್ಮನೆ ರಾಜಕೀಯ ಮಾಡೋದು ಬೇಡ’ ಎಂದಿದ್ದಾರೆ.
ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣ ತಿರುವು ಪಡೆದ ನಂತರ ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಬಸವರಾಜ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಟೀಕಾಪ್ರಹಾರ ಮಾಡಿದ್ದರು.
‘ಅಪಪ್ರಚಾರಕ್ಕೆ ವಿದೇಶದಿಂದ ಹಣ ಬಂದಿರುವ ಸಾಧ್ಯತೆ ಇದೆ. ಹಾಗಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಬೇಕು’ ಎಂದು ಒತ್ತಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.