ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶೋಧಕಾರ್ಯ ನಡೆಯುತ್ತಿರುವ ಜಾಗಕ್ಕೆ ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಬುಧವಾರ ಭೇಟಿ ನೀಡಿದರು
ಪ್ರಜಾವಾಣಿ ಚಿತ್ರ : ಫಕ್ರುದ್ದೀನ್ ಎಚ್
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ಮುಖ್ಯಸ್ಥ ಪ್ರಣವ್ ಮೊಹಾಂತಿ ಬುಧವಾರ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರನ್ನು ಭೇಟಿ ಮಾಡಿ ಅರ್ಧ ಗಂಟೆ ಚರ್ಚೆ ನಡೆಸಿದರು.
ಪ್ರಕರಣ ಕುರಿತು ಇದುವರೆಗೂ ನಡೆದ ಬೆಳವಣಿಗೆ, ಸಿಕ್ಕಿರುವ ಸಾಕ್ಷ್ಯಗಳು, ತನಿಖೆಯ ಸೂಕ್ಷ್ಮಗಳು, ಎಸ್‌ಐಟಿ ಅನುಸರಿಸಿದ ಕ್ರಮಗಳು, ತನಿಖೆಯ ವಿವರಗಳನ್ನು ಕುರಿತು ಗೃಹ ಸಚಿವರ ಜತೆ ಮಾಹಿತಿ ಹಂಚಿಕೊಂಡರು. ಎಸ್‌ಐಟಿ ಸದಸ್ಯರೂ ಆದ ನೇಮಕಾತಿ ವಿಭಾಗದ ಡಿಐಜಿ ಎಂ.ಎನ್.ಅನುಚೇತ್ ಜತೆಗಿದ್ದರು.
ಮೊಹಾಂತಿ ಜತೆಗಿನ ಚರ್ಚೆಯ ನಂತರ ಗೃಹ ಸಚಿವ ಪರಮೇಶ್ವರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವಿವರ ನೀಡಿದರು ಎಂದು ಗೊತ್ತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.