ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಸಾಕ್ಷಿ ದೂರುದಾರನನ್ನು ಬೆಳ್ತಂಗಡಿ ನ್ಯಾಯಾಲಯವು 12 ದಿನ ವಿಶೇಷ ತನಿಖಾ ತಂಡದ (ಎಸ್ಐಟಿ) ವಶಕ್ಕೆ ಶನಿವಾರ ಒಪ್ಪಿಸಿತು.
ನ್ಯಾಯಾಲಯದಿಂದ ಸಾಕ್ಷಿದೂರುದಾರನನ್ನು ಪೊಲೀಸರು ಬೆಳ್ತಂಗಡಿಯ ಎಸ್ಐಟಿ ಕಚೇರಿಗೆ ಕರದೊಯ್ದರು.
ಎಸ್ಐಟಿ ಎಸ್ಪಿ ಗಳಾದ ಜಿತೇಂದ್ರ ಕುಮಾರ್ ದಯಾಮ ಹಾಗೂ ಸಿ.ಎ.ಸೈಮನ್ ಅವರು ಕೂಡ ಎಸ್ಐಟಿ ಕಚೇರಿಗೆ ಕರೆದೊಯ್ದರು.
ಎಸ್ಐಟಿಯು ಈ ಪ್ರಕರಣದ ಕುರಿತು ಸಾಕ್ಷಿದೂರುದಾರನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಲಿದೆ.
ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಹಾಗೂ ನ್ಯಾಯಾಲಯದಿಂದ ಹೊರಗೆ ತರುವಾಗಲೂ ಸಾಕ್ಷಿದೂರುದಾರನ ಮುಖಕ್ಕೆ ಬಟ್ಟೆಯ ಕವಚ ಹಾಕಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.