ADVERTISEMENT

ಧರ್ಮಸ್ಥಳ ಪ್ರಕರಣ: ಬಾಹುಬಲಿ ಬೆಟ್ಟದ ಬಳಿ ಎಸ್‌ಐಟಿ ಶೋಧ

​ಪ್ರಜಾವಾಣಿ ವಾರ್ತೆ
Published 9 ಆಗಸ್ಟ್ 2025, 8:28 IST
Last Updated 9 ಆಗಸ್ಟ್ 2025, 8:28 IST
   

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಈ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಮೃತದೇಹಗಳನ್ನು ಹೂತು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಸಾಕ್ಷಿ ದೂರುದಾರ ತೋರಿಸಿದ ಹೊಸ ಜಾಗದಲ್ಲಿ ವಿಶೇಷ ತನಿಖಾ ತಂಡವು (ಎಸ್‌ಐಟಿ) ಶನಿವಾರ ಶೋಧ ಕಾರ್ಯ ನಡೆಸುತ್ತಿದೆ.

ಸಾಕ್ಷಿ ದೂರುದಾರ ಧರ್ಮಸ್ಥಳದ ಗ್ರಾಮದ ಬಾಹುಬಲಿ ಬೆಟ್ಟಕ್ಕೆ ತೆರಳುವ ದಾರಿಯ ಪಕ್ಕದಲ್ಲಿ ಜಾಗವನ್ನು ತೋರಿಸಿದ್ದು, ಅಲ್ಲೇ ಅಗೆಯಲಾಗುತ್ತಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್‌ ಎಸ್‌.ಪಿ. ಜಿತೇಂದ್ರ ಕುಮಾರ್ ದಯಾಮ, ವಿಧಿ ವಿಜ್ಞಾನ ತಜ್ಞರು ಅವರು ಸ್ಥಳದಲ್ಲಿದ್ದಾರೆ.

ಸಾಕ್ಷಿ ದೂರುದಾರ ಮೃತದೇಹಗಳನ್ನು ಹೂತಿರುವ ಕುರಿತು ಧರ್ಮಸ್ಥಳ ಗ್ರಾಮದಲ್ಲಿ ಒಟ್ಟು 15 ಜಾಗಗಳನ್ನು ತೋರಿಸಿದ್ದು ಅವುಗಳಲ್ಲಿ 14 ಜಾಗಗಳ ಶೋಧಕಾರ್ಯ ಪೂರ್ಣಗೊಂಡಿದೆ. ಇವುಗಳಲ್ಲಿ ಎರಡು ಕಡೆ ಮಾತ್ರ ಮೃತದೇಹಗಳ ಅವಶೇಷ ಸಿಕ್ಕಿದೆ. ಆತ ಮೊದಲ ದಿನ ತೋರಿಸಿದ್ದ 13ನೇ ಜಾಗದಲ್ಲಿ ಇನ್ನಷ್ಟೇ ಶೋಧ ಕಾರ್ಯ ನಡೆಯಬೇಕಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.