ADVERTISEMENT

ಧರ್ಮಸ್ಥಳ | ಸಾಕ್ಷಿ ದೂರುದಾರನ ಬಂಧನ: ಮುಂದಿನ ಕ್ರಮ SIT ನಿರ್ಧರಿಸಲಿದೆ-ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 8:31 IST
Last Updated 23 ಆಗಸ್ಟ್ 2025, 8:31 IST
   

ಉಡುಪಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷಿ ದೂರುದಾರನ ಬಂಧನವಾಗಿದ್ದು, ಮುಂದಿನ ಕ್ರಮ ಎಸ್ಐಟಿ ನಿರ್ಧರಿಸಲಿದೆ. ತನಿಖೆ ನಡೆಯುತ್ತಿರುವುದರಿಂದ ಹೆಚ್ಚಿನ ಮಾಹಿತಿ ನೀಡಲಾಗದು ಎಂದು ಗೃಹಸಚಿವ ಜಿ. ಪರಮೇಶ್ವರ ಹೇಳಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು ಸುಜಾತ ಭಟ್ ವಿಚಾರ ಕೂಡ ತನಿಖೆಯಲ್ಲಿದೆ. ಈ ಕಾರಣಕ್ಕೆ ಯಾವುದೇ ಮಾಹಿತಿಯನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದರು.

ಮುಖ್ಯಮಂತ್ರಿ ವಿರುದ್ಧ ಶಾಸಕ ಹರೀಶ್ ಪೂಂಜಾ ನೀಡಿರುವ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವರು, ಹರೀಶ್ ಪೂಂಜಾ ಅವರು 2023ರಲ್ಲಿ ತಡೆಯಾಜ್ಞೆ ತೆಗೆದುಕೊಂಡಿದ್ದಾರೆ. ತಡೆಯಾಜ್ಞೆ ತೆರವಾದರೆ ಕ್ರಮ ಕೈಗೊಳ್ಳಬಹುದ ಎಂದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.