ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಮಂಜುನಾಥೇಶ್ವರ ಸ್ವಾಮಿಯನ್ನು ನಂಬಿದ್ದರೆ, ಧರ್ಮಸ್ಥಳದ ವಿಚಾರದಲ್ಲಿ ತೆರೆಮರೆಯಲ್ಲಿ ನಿಂತು ಚಿತಾವಣೆ ಮಾಡುತ್ತಿರುವ ವ್ಯಕ್ತಿಗಳನ್ನು ತನಿಖೆಗೊಳಪಡಿಸಿ ಪಿತೂರಿಯನ್ನು ಬಯಲಿಗೆಳೆಯಬೇಕು ಎಂದು ಬಿಜೆಪಿ ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ ಒತ್ತಾಯಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಧರ್ಮಸ್ಥಳದ ವಿಚಾರದಲ್ಲಿ ಜನರ ತಾಳ್ಮೆ ಮತ್ತು ಸಹನೆಯನ್ನು ಪರೀಕ್ಷೆ ಮಾಡುತ್ತಿದ್ದೀರಾ? ಸರ್ಕಾರ ಬದುಕಿದೆಯೇ ಇಲ್ಲವೇ ಎಂಬುದು ಗೊತ್ತಾಗಬೇಕಲ್ಲ’ ಎಂದರು.
‘ಯೂಟ್ಯೂಬರ್‌ಗಳು ಧರ್ಮಸ್ಥಳದ ವಿಚಾರದಲ್ಲಿ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅವರೇ ತನಿಖೆ ನಡೆಸಿ, ತೀರ್ಪು ಕೊಡುತ್ತಿದ್ದಾರೆ. ಇದರಿಂದ ಹಿಂದೂ ಸಮಾಜ ಮತ್ತು ಮಂಜುನಾಥೇಶ್ವರನನ್ನು ನಂಬುವ ಭಕ್ತರಿಗೆ ನೋವಾಗಿದೆ’ ಎಂದು ಅವರು ಹೇಳಿದರು.
<p class="quote">ಧರ್ಮಸ್ಥಳ ವಿಚಾರದಲ್ಲಿ ಜನರ ತಾಳ್ಮೆ ಪರೀಕ್ಷಿಸುತ್ತಿದ್ದೀರಾ? ಸರ್ಕಾರ ಬದುಕಿದೆಯೇ, ಇಲ್ಲವೇ ಎಂದು ತಿಳಿಯಬೇಕಲ್ಲ? ಡಿಸಿಎಂ ಅವರೇ ಪಿತೂರಿ ಬಯಲಿಗೆಳೆಯಲಿ. ಡಾ.ಅಶ್ವತ್ಥನಾರಾಯಣ, <span class="Designate">ಬಿಜೆಪಿ ಶಾಸಕ</span></p>
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.