ADVERTISEMENT

ಸಿದ್ದರಾಮಯ್ಯ ಮಂಜುನಾಥನ ದರ್ಶನ ಪಡೆದು ತಪ್ಪಾಯಿತು ಎಂದು ಕೇಳಿಕೊಳ್ಳಬೇಕು: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2025, 19:49 IST
Last Updated 23 ಆಗಸ್ಟ್ 2025, 19:49 IST
ವಿ.ಸೋಮಣ್ಣ
ವಿ.ಸೋಮಣ್ಣ   

ತುಮಕೂರು: ‘ಯಾರದೊ ಮಾತು ಕೇಳಿಕೊಂಡು ಎಸ್‌ಐಟಿ ತನಿಖೆಗೆ ಆದೇಶಿಸುವ ಪಾಪದ ಕೃತ್ಯಕ್ಕೆ ಸಿದ್ದರಾಮಯ್ಯ ಕೈ ಹಾಕಿದ್ದಾರೆ. ಈಗ ಸತ್ಯ ಬಯಲಾಗಿದೆ. ಬೆಲೆ ತೆರಬೇಕಾಗುತ್ತದೆ’ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಇಲ್ಲಿ ಶನಿವಾರ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಖ್ಯಮಂತ್ರಿ, ಸಚಿವರು ಮೊದಲು ಧರ್ಮಸ್ಥಳಕ್ಕೆ ಹೋಗಿ ಮಂಜುನಾಥನ ದರ್ಶನ ಪಡೆದು ತಪ್ಪಾಯಿತು ಎಂದು ಕೇಳಿಕೊಂಡರೆ ಒಳ್ಳೆಯದಾಗುತ್ತದೆ. ಈಗ ತಪ್ಪಾಗಿ ನಡೆದುಕೊಂಡಿರುವುದು ಸರ್ಕಾರಕ್ಕೆ ಒಂದಿಲ್ಲೊಂದು ದಿನ ತಿರುಗುಬಾಣವಾಗಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT