ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಹಿಂದೆ ನಡೆದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹೂತು ಹಾಕಲಾಗಿದೆ ಎನ್ನಲಾದ ಮೃತದೇಹ ಪತ್ತೆಗೆ ಜಾಗ ಅಗೆಯುವ ಕಾರ್ಯಕ್ಕೆ ನೀರಿನ ಒರತೆ ಅಡ್ಡಿಯಾಯಿತು. ನಂತರ, ಜೆಸಿಬಿಯನ್ನು ಸ್ಥಳಕ್ಕೆ ತರಿಸಿ ಅಗೆಯುವ ಕಾರ್ಯ ಮುಂದುವರಿಸಲಾಯಿತು. ದೂರುದಾರ ಗುರುತಿಸಿದ ಮೊದಲ ಜಾಗದಲ್ಲಿ ಮಂಗಳವಾರ ಎಂಟು ಅಡಿ ಆಳದವರೆಗೆ ನೆಲ ಅಗೆದರೂ ಯಾವುದೇ ಅಸ್ಥಿಪಂಜರ ಸಿಗಲಿಲ್ಲ. ಬುಧವಾರ ಮತ್ತೆ ಭೂಮಿ ಅಗೆಯುವ ಕಾರ್ಯ ಮುಂದುವರಿಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.