ಬೆಂಗಳೂರು: ‘ಧರ್ಮಸ್ಥಳದ ಸುತ್ತಮುತ್ತ ನಡೆದಿವೆ ಎನ್ನಲಾದ ಅಸಹಜ ಸಾವುಗಳ ಕುರಿತಂತೆ ನಡೆಯುತ್ತಿರುವ ತನಿಖೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯಬೇಕು’ ಎಂದು ಕೋರಿ ಹೈಕೋರ್ಟ್ ವಕೀಲರಾದ ಟಿ.ಶ್ರೀರಾಮ್ ಟಿ.ನಾಯಕ್, ಬಿ.ಎಸ್.ಗಣೇಶ್ ಪ್ರಸಾದ್, ವಿ.ಗಣೇಶ ಮತ್ತು ಕೆ.ಎ.ಪೊನ್ನಣ್ಣ ಮನವಿ ಮಾಡಿದ್ದಾರೆ.
ಈ ಸಂಬಂಧ ಸೋಮವಾರ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಅವರಿಗೆ ಐದು ಪುಟಗಳ ಪತ್ರ ಸಲ್ಲಿಸಿರುವ ಅವರು, ‘ಪ್ರಕರಣದ ತನಿಖೆ ನಿಧಾನಗತಿಯಲ್ಲಿ ಸಾಗುತ್ತಿದೆ. ಹಾಗಾಗಿ, ಹೈಕೋರ್ಟ್ ತಕ್ಷಣವೇ ಮಧ್ಯಪ್ರವೇಶಿಸಬೇಕಾದ ಅವಶ್ಯಕತೆ ಇದೆ’ ಎಂದು ಕೋರಿದ್ದಾರೆ.
‘ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜೂನ್ 3ರಂದೇ ದೂರು ದಾಖಲಾಗಿದೆ. ಇಂದಿಗೆ 17 ದಿನಗಳೇ ಕಳೆದಿದ್ದರೂ ಈತನಕ ಆರೋಪಿಗಳ ಬಂಧನಕ್ಕೆ ಕ್ರಮ ಜರುಗಿಲ್ಲ. ಇದು ಆಘಾತಕಾರಿ ಸಂಗತಿ’ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.