ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಮಹಿಳೆಯರ ಮೇಲಿನ ಎಲ್ಲ ದೌರ್ಜನ್ಯ ಪ್ರಕರಣಗಳನ್ನೂ ವಿಶೇಷ ತನಿಖಾ ತಂಡದ(ಎಸ್‌ಐಟಿ) ವ್ಯಾಪ್ತಿಗೆ ತರಬೇಕು. ತಾರ್ಕಿಕ ಅಂತ್ಯದವರೆಗೂ ಎಸ್‌ಐಟಿ ತನಿಖೆ ಮುಂದುವರೆಸಬೇಕು ಎಂದು ಮಹಿಳಾ ಹೋರಾಟಗಾರರು, ಲೇಖಕಿಯರು ಒತ್ತಾಯಿಸಿದರು.
‘ಕೊಂದವರು ಯಾರು ಆಂದೋಲನ’ದ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಮಹಿಳಾ ನಿಯೋಗ, ಧರ್ಮಸ್ಥಳ ಪ್ರಕರಣಗಳಲ್ಲಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸಿಬಿಐ ಕೋರ್ಟ್ ಹೇಳಿದೆ. ಈ ಕುರಿತು ಕ್ರಮ ಕೈಗೊಳ್ಳಬೇಕು. ಎಸ್‌ಐಟಿ ತನಿಖೆಯನ್ನು ಸಮಗ್ರವಾಗಿ ನಡೆಸಬೇಕು. ತಾರ್ಕಿಕ ಅಂತ್ಯದವರೆಗೂ ಸ್ಥಗಿತಗೊಳಿಸಬಾರದು’ ಎಂದು ಮನವಿ ಮಾಡಿತು.
‘ಮಹಿಳೆಯರು ಹಾಗೂ ಸಮಾನಮನಸ್ಕರು ಸೇರಿ ‘ಕೊಂದವರು ಯಾರು ಆಂದೋಲನ’ ರಚಿಸಿದ್ದೇವೆ. ಧರ್ಮಸ್ಥಳದ ದೌರ್ಜನ್ಯ ಪ್ರಕರಣಗಳಲ್ಲಿ ನೊಂದ ಮಹಿಳೆಯರ ಪರವಾಗಿ ಆಂದೋಲನ ಧ್ವನಿ ಎತ್ತುತ್ತಿದೆ. ಸರ್ಕಾರ ನೊಂದವರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು’ ಎಂದು ಕೋರಿದರು.
ಆಂದೋಲನದ ಪ್ರಮುಖರಾದ ಚಂಪಾವತಿ, ಮಧು ಭೂಷಣ್, ಶಕುನ್, ಮಾಯಾರಾವ್, ಗೌರಮ್ಮ, ಜ್ಯೋತಿ ಅನಂತಸುಬ್ಬರಾವ್, ಮಮತಾ ಯಜಮಾನ್, ಮಲ್ಲಿಗೆ ಸಿರಿಮನೆ, ಗೀತಾ, ಸುಜಾತಾ ನಿಯೋಗದಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.