ADVERTISEMENT

ಧರ್ಮೇಗೌಡ ಪ್ರಕರಣ: ಪ್ರಾಥಮಿಕ ತನಿಖೆ ಆಧರಿಸಿ ಮುಂದಿನ ನಿರ್ಧಾರ -ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2020, 8:07 IST
Last Updated 31 ಡಿಸೆಂಬರ್ 2020, 8:07 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಅವರ ಸಾವಿನ ಪ್ರಕರಣದ ಕುರಿತು ಪ್ರಾಥಮಿಕ ತನಿಖೆಯ ವರದಿ ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಧರ್ಮೇಗೌಡರ ಡೆತ್ ನೋಟ್ ವಶಕ್ಕೆ ಪಡೆಯಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಬರಬೇಕಿದೆ. ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರ ವರದಿ, ಅಂಗಾಂಗ ಪರೀಕ್ಷಾ ವರದಿಗಳನ್ನು ನಿರೀಕ್ಷಿಸಲಾಗುತ್ತಿದೆ' ಎಂದರು.

ಈ ಪ್ರಕರಣ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರು ಹೇಳಿರುವುದು ಸರ್ಕಾರದ ಗಮನದಲ್ಲಿ ಇದೆ. ಪ್ರಾಥಮಿಕ ತನಿಖಾ ವರದಿ ಲಭ್ಯವಾದ ಬಳಿಕ ಮುಂದಿನ ತನಿಖೆ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದರು.

ADVERTISEMENT

ತನಿಖೆ ಇನ್ನೂ ಪ್ರಗತಿಯಲ್ಲಿದೆ. ಯಾವ ಕಾರಣಕ್ಕಾಗಿ ಧರ್ಮೇಗೌಡ ಅವರು ಸಾವಿಗೆ ಶರಣಾಗಿದ್ದಾರೆ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.