ADVERTISEMENT

ಧಾರವಾಡದಲ್ಲಿ ವಿಶೇಷ ಆರ್ಥಿಕ ವಲಯ: ಕೇಂದ್ರ ಸರ್ಕಾರ ಗೆಜೆಟ್‌ ಅಧಿಸೂಚನೆ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 16:11 IST
Last Updated 13 ಆಗಸ್ಟ್ 2025, 16:11 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

– ‍ಪಿಟಿಐ ಚಿತ್ರ

ನವದೆಹಲಿ: ಧಾರವಾಡದ ಇಟ್ಟಿಗಟ್ಟಿಯಲ್ಲಿ ಎಲೆಕ್ಟ್ರಾನಿಕ್ ಘಟಕಗಳಿಗಾಗಿ ವಿಶೇಷ ಆರ್ಥಿಕ ವಲಯ (ಎಸ್‌ಇಜೆಡ್‌) ಸ್ಥಾಪನೆಗೆ ಕೇಂದ್ರ ಸರ್ಕಾರ ಗೆಜೆಟ್‌ ಅಧಿಸೂಚನೆ ಹೊರಡಿಸಿದೆ. 

ADVERTISEMENT

ಉತ್ತರ ಕರ್ನಾಟಕ ಭಾಗದಲ್ಲಿ ಎಸ್‌ಇಜೆಡ್‌ ಸ್ಥಾಪಿಸಬೇಕು ಎಂದು ಒತ್ತಾಯಿಸಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್‌ ಗೋಯಲ್‌ ಅವರಿಗೆ ಮನವಿ ಸಲ್ಲಿಸಿದ್ದರು. 

ಒಟ್ಟು 391 ಎಕರೆಯಲ್ಲಿರುವ ಏಕಸ್ ಇನ್ಫ್ರಾದ ಹುಬ್ಬಳ್ಳಿ ಡ್ಯೂರಬಲ್ ಗೂಡ್ಸ್ ಕ್ಲಸ್ಟರ್‌ನಲ್ಲಿ 28 ಎಕರೆಯಲ್ಲಿ ವಿಶೇಷ ಆರ್ಥಿಕ ವಲಯ ಸ್ಥಾಪನೆಯಾಗಲಿದೆ. ಹುಬ್ಬಳ್ಳಿ-ಧಾರವಾಡದ ಕೈಗಾರಿಕಾ ಪ್ರದೇಶದಲ್ಲಿ ಎಲೆಕ್ಟ್ರಾನಿಕ್ ಉತ್ಪನ್ನಗಳ ಉತ್ಪಾದನೆಗೆ ಈ ವಿಶೇಷ ಆರ್ಥಿಕ ವಲಯ ಉತ್ತೇಜನ ನೀಡಲಿದೆ ಎಂದು ಜೋಶಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.