
ಪ್ರಜಾವಾಣಿ ವಾರ್ತೆ
ಧಾರವಾಡ: ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಶಿರಹಟ್ಟಿಯ ಭಾವೈಕ್ಯ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರ ನಾಮಪತ್ರ ವಾಪಸ್ ಪಡೆಯಲಾಗಿದೆ.
ಏಜೆಂಟ್ ಸಚಿನ್ ಪಾಟೀಲ ಅವರು ಸ್ವಾಮೀಜಿ ಅವರ 'ಅಥಾರಿಟಿ ಪತ್ರ' ಸಲ್ಲಿಸಿ ನಾಮಪತ್ರ ಹಿಂಪಡೆದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್ ಪಾಟೀಲ, 'ಸ್ವಾಮೀಜಿ ಆದೇಶದಂತೆ ಅವರ ಅಥಾರಿಟಿ ಪತ್ರ ಸಲ್ಲಿಸಿ ನಾಮಪತ್ರ ವಾಪಸ್ ಪಡೆಯಲಾಗಿದೆ. ಸ್ವಾಮೀಜಿ ಅವರ ಈ ನಿರ್ಧಾರಕ್ಕೆ ಕಾರಣ ನಮಗೆ ಗೊತ್ತಿಲ್ಲ' ಎಂದರು.
ದಿಂಗಾಲೇಶ್ವರ ಸ್ವಾಮೀಜಿ ಅವರು ಧಾರವಾಡಕ್ಕೆ ಬಂದಿದ್ದರು. ಜಿಲ್ಲಾ ಚುನಾವಣಾ ಕಚೇರಿಯತ್ತ ಸುಳಿಯಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.