ADVERTISEMENT

ಧಾರವಾಡ: ಕೋವಿಡ್-19ನಿಂದ ಇಬ್ಬರು ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 2 ಮೇ 2020, 10:56 IST
Last Updated 2 ಮೇ 2020, 10:56 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಧಾರವಾಡ: ಕೋವಿಡ್‌ನಿಂದ ಗುಣಮುಖರಾಗಿರುವ ಇಬ್ಬರು ಮಕ್ಕಳನ್ನು ಶುಕ್ರವಾರ ( ಮೇ 1) ಹುಬ್ಬಳ್ಳಿಯ ಕಿಮ್ಸ್‌ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ.

ಕೋವಿಡ್-19 ಪಾಸಿಟಿವ್ ಆಗಿದ್ದ ಪಿ- 234( 3.6 ವರ್ಷ, ಗಂಡು ಮಗು) ಹಾಗೂ ಪಿ-235 (7 ವರ್ಷ, ಬಾಲಕಿ) ಇವರು ಸಂಪೂರ್ಣ ಗುಣಮುಖರಾಗಿದ್ದು, 24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರು ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ.

ಎಕ್ಸ್ ರೇ ಮೂಲಕ ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನೂ ವೈದ್ಯರು ದೃಢಪಡಿಸಿದ್ದರಿಂದ ಈ ಇಬ್ಬರೂ ಮಕ್ಕಳನ್ನು ಬಿಡುಗಡೆ ಮಾಡಲಾಗಿದೆ. ಈ ಮಕ್ಕಳ ಆರೈಕೆಗಾಗಿ ಆಸ್ಪತ್ರೆಯಲ್ಲಿದ್ದ ಇವರ ತಾಯಿಗೆ ಕೋವಿಡ್ ತಗುಲಿರಲಿಲ್ಲ. ಆದರೂ ಪರೀಕ್ಷಿಸಿ ನೆಗೆಟಿವ್ ವರದಿ ಬಂದ ನಂತರ ಮಕ್ಕಳೊಂದಿಗೆ ಕಳುಹಿಸಿಕೊಡಲಾಯಿತು.

ADVERTISEMENT

ಜಿಲ್ಲೆಯಲ್ಲಿ ಇದುವರೆಗೆ ನಾಲ್ವರು ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಆರು ಜನ ಕಿಮ್ಸ್‌ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.