ADVERTISEMENT

ಧಾರವಾಡ ವಿಶ್ವವಿದ್ಯಾಲಯಕ್ಕೆ ಕನಕದಾಸರ ಹೆಸರು ಶಿಫಾರಸು

ಶ್ರೀ ರೇವಣಸಿದ್ದೇಶ್ವರ ಮಹಾಮಠದ ಬಸವರಾಜ ದೇವರು ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2018, 6:29 IST
Last Updated 2 ನವೆಂಬರ್ 2018, 6:29 IST
   

ಹುಬ್ಬಳ್ಳಿ: ಧಾರವಾಡ ವಿಶ್ವವಿದ್ಯಾಲಯಕ್ಕೆ ಕನಕದಾಸರ ಹೆಸರನ್ನು ನಾಮಕರಣ ಮಾಡಬೇಕು ಎಂದು ಮನಸೂರು ಶ್ರೀ ರೇವಣಸಿದ್ದೇಶ್ವರ ಮಹಾಮಠದ ಬಸವರಾಜ ದೇವರು ಆಗ್ರಹಿಸಿದರು.

ಹಾಲುಮತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಅವರು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಉಡುಪಿ ಕೃಷ್ಣ ಮಠದ ಗರ್ಭಗುಡಿಯಲ್ಲಿ ಕನಕನ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು ಎಂದು ಅಷ್ಠಮಠಾಧೀಶರನ್ನು ಒತ್ತಾಯಿಸಿದರು. ಅಷ್ಠಮಠಗಳ ಜೊತೆಗೆ ಒಂಬತ್ತನೇ ಮಠವಾಗಿ ಕುರುಬರ ಮಠ ಹಾಗೂ ಹತ್ತನೇ ಮಠವಾಗಿ ಗೊಲ್ಲರ ಮಠವನ್ನು ಉಡುಪಿಯಲ್ಲಿ ಸ್ಥಾಪಿಸಬೇಕು ಎಂದು ಅವರು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.