
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ನಟ ಧ್ರುವ ಸರ್ಜಾ ಅವರ ಅಭಿಮಾನಿಗಳಿಂದ ತೊಂದರೆ ಆಗುತ್ತಿದೆ’ ಎಂದು ಆರೋಪಿಸಿ ಶಾಸ್ತ್ರಿನಗರದ ನಿವಾಸಿ ಮನೋಜ್ ಅವರು ದೂರು ನೀಡಿದ್ದು, ಈ ಸಂಬಂಧ ಬನಶಂಕರಿ ಠಾಣೆಯಲ್ಲಿ ಎನ್‌ಸಿಆರ್ ದಾಖಲಾಗಿದೆ.
‘ಮನೋಜ್ ಅವರು ನೀಡಿದ ದೂರು ಆಧರಿಸಿ ಗಂಭೀರವಲ್ಲದ ಪ್ರಕರಣ (ಎನ್‌ಸಿಆರ್) ದಾಖಲಿಸಿಕೊಳ್ಳಲಾಗಿದೆ. ನ್ಯಾಯಾಲಯದ ಸೂಚನೆ ಮೇರೆಗೆ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.