ಬೆಂಗಳೂರು: ವಿಧಾನಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಛಲವಾದಿ ನಾರಾಯಸ್ವಾಮಿ ಅಧಿಕೃತವಾಗಿ ಕಾರ್ಯಾರಂಭ ಮಾಡಿದ್ದಾರೆ.
ಸಭಾಪತಿ ಬಸವರಾಜ ಹೊರಟ್ಟಿ ಅವರು, ಪರಿಷತ್ತಿನಲ್ಲಿ ಬುಧವಾರ ಈ ಪ್ರಕಟಣೆ ಮಾಡಿದರು.
‘ಹೋರಾಟದ ಹಾದಿಯಿಂದ ಜವಾಬ್ದಾರಿಯುತ ಸ್ಥಾನಕ್ಕೆ ಬಂದಿದ್ದೀರಿ. ಈ ಸ್ಥಾನಕ್ಕೆ ಬಂದ ಮೇಲೆ ಜವಾಬ್ದಾರಿಯುತವಾಗಿ ಮಾತನಾಡಬೇಕು. ಅಲ್ಲಿ ಕುಳಿತಂತೆ ಮಾತನಾಡಲು ಸಾಧ್ಯವಿಲ್ಲ. ಇದನ್ನೆಲ್ಲ ಅರಿತುಕೊಂಡು ಕಾರ್ಯನಿರ್ವಹಿಸಿ’ ಎಂದು ಹೊರಟ್ಟಿ ಸಲಹೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.