ADVERTISEMENT

ಮುಸ್ಲಿಂ ಮೀಸಲಾತಿ ತೆಗೆಯುವುದು ಅಸಾಧ್ಯ: ಸಿ.ಎಂ. ಇಬ್ರಾಹಿಂ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2022, 21:30 IST
Last Updated 24 ಅಕ್ಟೋಬರ್ 2022, 21:30 IST
ಸಿ.ಎಂ. ಇಬ್ರಾಹಿಂ
ಸಿ.ಎಂ. ಇಬ್ರಾಹಿಂ    

ವಿಜಯಪುರ: ‘ರಾಜ್ಯದಲ್ಲಿ ಬಿಜೆಪಿ ಸರ್ಕಾರದಿಂದ ಮುಸ್ಲಿಂ ಮೀಸಲಾತಿ ತೆಗೆಯುವುದು ಅಸಾಧ್ಯ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ. ಇಬ್ರಾಹಿಂಅಭಿಪ್ರಾಯಪಟ್ಟರು.

ಪತ್ರಿಕಾಗೋಷ್ಠಿಯಲ್ಲಿ ಸೋಮವಾರ ಅವರು, ಹಿಂದೆ ‘ಕೇಶವ ಕೃಪಾ’ದಿಂದ ಬಂದಂತ ಬಿ.ಎಸ್.ಯಡಿಯೂರಪ್ಪ ಅವರು ಸಿ.ಎಂ ಆಗಿದ್ದಾಗಲೇ ಮುಸ್ಲಿಮರ ಮೀಸಲಾತಿ ತೆಗೆಯಲು ಸಾಧ್ಯವಾಗಿಲ್ಲ. ಇನ್ನು ‘ಬಸವ ಕೃಪ’ದಿಂದ ಬಂದಿರುವ ಮುಖ್ಯಮಂತ್ರಿ ಅವರಿಂದ ಸಾಧ್ಯವೇ?’ ಎಂದು ಪ್ರಶ್ನಿಸಿದರು.

‘ಬಿಜೆಪಿ ಸರ್ಕಾರಕ್ಕೆ ಮೀಸಲಾತಿ ಬಗ್ಗೆ ಸ್ಪಷ್ಟತೆ ಇಲ್ಲ. ಮೀಸಲಾತಿ ವಿಷಯವಾಗಿ ರಾಜ್ಯದಲ್ಲಿ ಅಶಾಂತಿ ಮೂಡದಂತೆ ಸರ್ಕಾರ ನೋಡಿಕೊಳ್ಳಬೇಕು. ಮೀಸಲಾತಿ ಬಗ್ಗೆ ಅನೇಕ ಜಾತಿ, ಸಮುದಾಯದವರ ಬೇಡಿಕೆ ಬಗ್ಗೆ ಸಮಗ್ರ ಚರ್ಚೆಯಾಗಲಿ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.