ADVERTISEMENT

ಸಮರ್ಪಕ ರಾಜನೀತಿ ಅಗತ್ಯ: ವಾಲಾ

ಪಂ.ದೀನದಯಾಳ್ ಅಧ್ಯಯನ ಪೀಠಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 6 ಜೂನ್ 2019, 19:29 IST
Last Updated 6 ಜೂನ್ 2019, 19:29 IST
.
.   

ಬೆಳಗಾವಿ: ‘ಸ್ವಾತಂತ್ರ್ಯ ನಂತರ ಭಾರತೀಯ ಸಮಾಜಕ್ಕೆ ಹೊಂದಿಕೊಳ್ಳುವಂತಹ ರಾಜನೀತಿ ಮತ್ತು ಆರ್ಥಿಕ ನೀತಿಯನ್ನು ರೂಪಿಸಿ ಅನುಷ್ಠಾನಕ್ಕೆ ತರಲು ಸಾಧ್ಯವಾಗಿಲ್ಲ. ಇನ್ನಾದರೂ ಈ ಕಾರ್ಯ ನಡೆಯುವ ಅಗತ್ಯವಿದೆ’ ಎಂದು ರಾಜ್ಯಪಾಲ ವಜೂಭಾಯಿ ಆರ್. ವಾಲಾ ಅಭಿಪ್ರಾಯಪಟ್ಟರು.

ಇಲ್ಲಿನ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಸ್ಥಾಪಿಸಿರುವ ಪಂಡಿತ್ ದೀನದಯಾಳ್ ಉಪಾಧ್ಯಾಯ ಅಧ್ಯಯನ ಪೀಠವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಪೀಠ ಸ್ಥಾಪನೆಗೆ ಕೇಂದ್ರ ಸಂಸ್ಕೃತಿ ಸಚಿವಾಲಯ ₹5.78 ಕೋಟಿ ಅನುದಾನ ಕೊಟ್ಟಿದೆ. ದಕ್ಷಿಣ ಭಾರತದಲ್ಲಿ ದೀನದಯಾಳ್‌ ಹೆಸರಿನಲ್ಲಿ ಇರುವ ಮೊದಲ ಪೀಠ ಇದು ಎಂದು ಹೇಳಲಾಗಿದೆ.

ADVERTISEMENT

ಪೀಠ ಉದ್ಘಾಟನೆ ಬಳಿಕ ಮಾತನಾಡಿದ ರಾಜ್ಯಪಾಲರು, ‘ಕಾವೇರಿ, ತುಂಗಭದ್ರಾ ಮತ್ತು ಕೃಷ್ಣಾ‌ ನದಿಗೆ ದೊಡ್ಡ ದೊಡ್ಡ ಜಲಾಶಯಗಳನ್ನು ಕಟ್ಟಲಾಗಿದೆ. ಆದರೆ, ನೀರಿನ ಕೊರತೆಯ ಸಮಸ್ಯೆ ಪರಿಹಾರವಾಗಿದೆಯೇ? ಚಿಕ್ಕ ಜಲಾಶಯ ನಿರ್ಮಾಣದಿಂದ ಆ ಭಾಗದ ಜನರಿಗೆ ಅನುಕೂಲವಾಗುತ್ತದೆ’ ಎಂದರು. ‘ರೈತರಿಗೆ ಸಾಲ ಕೊಡಬೇಕಾಗಿಲ್ಲ. ಅವರಿಗೆ ಬೇಕಾಗಿರುವುದು ನೀರು. ನದಿಗಳ‌ ಜೋಡಣೆಯಿಂದ ಇದು ಸಾಧ್ಯವಾಗುತ್ತದೆ. ಇದರೊಂದಿಗೆ ವಾಟರ್ ಗ್ರಿಡ್ ಯೋಜನೆ ಜಾರಿಗೊಳಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.