ಸಾಂದರ್ಭಿಕ ಚಿತ್ರ
ಬೆಂಗಳೂರು: ಡಿಪ್ಲೊಮಾ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಎಂಜಿನಿಯಾರಿಂಗ್ ಕೋರ್ಸ್ ನ ಎರಡನೇ ವರ್ಷಕ್ಕೆ ನೇರ ಪ್ರವೇಶ ನೀಡಲು ಮೇ 31 ರಂದು ಡಿ - ಸಿಇಟಿ ನಡೆಯುತ್ತಿದೆ.
ಈ ಪರೀಕ್ಷೆಗಳಲ್ಲೂ ಮುಖ ಚಹರೆ ಪತ್ತೆ ತಂತ್ರಜ್ಞಾನದ ಮೂಲಕವೇ ಅಭ್ಯರ್ಥಿಗಳ ಗುರುತು ಪತ್ತೆ ಹಚ್ಚಲಾಗುತ್ತದೆ. ನಕಲಿ ಅಭ್ಯರ್ಥಿಗಳ ಪ್ರವೇಶಕ್ಕೆ ಅವಕಾಶವೇ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ಡಿಪ್ಲೊಮಾ ಮುಗಿಸಿ, ಎಂಜಿನಿಯರಿಂಗ್ ಪದವಿಯ 3ನೇ ಸೆಮಿಸ್ಟರ್ ಅಥವಾ ಎರಡನೇ ವರ್ಷಕ್ಕೆ ನೇರ ಪ್ರವೇಶ ಕಲ್ಪಿಸಲು ರಾಜ್ಯದ 46 ಕೇಂದ್ರಗಳಲ್ಲಿ ಡಿ–ಸಿಇಟಿ ನಡೆಸುತ್ತಿದ್ದು, 21,201 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎಂ.ಟೆಕ್‌ನ ಮ್ಯಾಕಾನಿಕಲ್, ಸಿವಿಲ್ ಮತ್ತು ಎಲೆಕ್ಟ್ರಿಕಲ್ ಸೈನ್ಸ್ ಕೋರ್ಸ್‌ಗಳ ಪ್ರವೇಶಕ್ಕೆ 46 ಕೇಂದ್ರಗಳಲ್ಲಿ ಪಿಜಿ– ಸಿಇಟಿ ನಡೆಯುತ್ತಿದ್ದು, 3,756 ಮಂದಿ ಪರೀಕ್ಷೆ ಬರೆಯುತ್ತಿದ್ದಾರೆ ಎಂದು ವಿವರಿಸಿದ್ದಾರೆ.
ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ:
ಸಿಇಟಿ ಬರೆದ ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಜೂನ್ 3ರಿಂದ 6ರವರೆಗೆ ನಡೆಯಲಿದೆ. ಅಭ್ಯರ್ಥಿಗಳು ಮುಂಗಡವಾಗಿ ದಿನಾಂಕ ಕಾಯ್ದಿರಿಸಿಕೊಳ್ಳಲು ವೆಬ್‌ಸೈಟ್‌ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗಿದೆ.
ಪಿಜಿ– ಸಿಇಟಿ (ಎಂ.ಇ, ಎಂ.ಟೆಕ್) ತೆಗೆದುಕೊಂಡಿರುವ ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಜೂನ್ 9ರಂದು ಕೆಇಎ ಕಚೇರಿಯಲ್ಲಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.