ADVERTISEMENT

ಹಕ್ಕುಪತ್ರ ಶುಲ್ಕ ಕಡಿತದ ಬಗ್ಗೆ ಸಂಪುಟದಲ್ಲಿ ಚರ್ಚೆ: ವಿ. ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2021, 17:51 IST
Last Updated 2 ಅಕ್ಟೋಬರ್ 2021, 17:51 IST
ವಿ. ಸೋಮಣ್ಣ
ವಿ. ಸೋಮಣ್ಣ    

ಹುಬ್ಬಳ್ಳಿ: ‘ಕೊಳಚೆ ಪ್ರದೇಶದ ನಿವಾಸಿಗಳಿಗೆ ನೀಡುವ ಹಕ್ಕುಪತ್ರದ ಶುಲ್ಕವನ್ನು ಕಡಿಮೆ ಮಾಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಹುಬ್ಬಳ್ಳಿಯ ಕೊಳಚೆ ಪ್ರದೇಶದ ನಿವಾಸಿಗಳಿಗೆ ಚಾಮುಂಡೇಶ್ವರಿ ನಗರದಲ್ಲಿ ಶನಿವಾರ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.

‘ಹಕ್ಕುಪತ್ರ ನೀಡಲು ಸಾಮಾನ್ಯ ವರ್ಗದವರಿಂದ ₹4 ಸಾವಿರ, ಪರಿಶಿಷ್ಟ ವರ್ಗದವರಿಂದ ₹2 ಸಾವಿರ ಪಡೆಯಲಾಗುತ್ತಿದೆ. ಕಡುಬಡವರಿಗೆ ಈ ಹಣವನ್ನೂ ಭರಿಸಲು ಕಷ್ಟವಾಗುತ್ತಿದೆ ಎನ್ನುವ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಸಾಮಾನ್ಯ ವರ್ಗದವರಿಗೆ ₹2 ಸಾವಿರ ಮತ್ತು ಪರಿಶಿಷ್ಟ ವರ್ಗದವರಿಗೆ ₹1 ಸಾವಿರ ನಿಗದಿ ಮಾಡಲು ಚಿಂತನೆ ನಡೆದಿದೆ’ ಎಂದು ತಿಳಿಸಿದರು.

ADVERTISEMENT

‘ರಾಜ್ಯದ ಕೊಳಚೆ ಪ್ರದೇಶದಲ್ಲಿರುವ 3.37 ಲಕ್ಷ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿಕೊಟ್ಟು, ಏಕಕಾಲದಲ್ಲಿ ಹಕ್ಕು ಪತ್ರ ನೀಡಲಾಗುತ್ತಿದೆ. ಅದಕ್ಕಾಗಿ 8,600 ಎಕರೆ ಜಾಗವನ್ನು ನೀಡಲಾಗಿದೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.