ADVERTISEMENT

ಬೊಮ್ಮಾಯಿ ದೆಹಲಿಗೆ ಹೋಗಿದ್ದೇಕೆ? ರಾಜಕೀಯ ವಲಯದಲ್ಲಿ ಚರ್ಚೆ

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 6:56 IST
Last Updated 11 ನವೆಂಬರ್ 2021, 6:56 IST
ಸಿಎಂ ಬಸವರಾಜ್‌ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಚಿತ್ರ
ಸಿಎಂ ಬಸವರಾಜ್‌ ಬೊಮ್ಮಾಯಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯ ಚಿತ್ರ    

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ದಿಢೀರ್‌ ದೆಹಲಿಗೆ ತೆರಳಿರುವುದು ಮತ್ತು ಗುರುವಾರ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಪಕ್ಷದ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡುತ್ತಿರುವುದು ರಾಜಕೀಯ ವಲಯದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ.

ಬಿಟ್‌ಕಾಯಿನ್ ಪ್ರಕರಣದಲ್ಲಿ ರಾಜಕೀಯ ವ್ಯಕ್ತಿಗಳೂ ಇದ್ದಾರೆ ಎಂಬ ವದಂತಿ ಬಗ್ಗೆ ಮೋದಿ, ಅಮಿತ್‌ ಶಾ ಮತ್ತು ನಡ್ಡಾ ಅವರಿಗೆ ಸಮಜಾಯಿಷಿ ನೀಡಲು ಬೊಮ್ಮಾಯಿ ಹೋಗಿದ್ದಾರೆ ಎಂಬ ಚರ್ಚೆ ಬಿಜೆಪಿಯಲ್ಲಿ ನಡೆಯುತ್ತಿದೆ.

ದೆಹಲಿಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ‘ಬಿಟ್ ಕಾಯಿನ್ ಹಗರಣಕ್ಕೆ‌ ಸಂಬಂಧಿಸಿದಂತೆ‌ ಬಿಜೆಪಿ ಹೈಕಮಾಂಡ್ ಯಾವುದೇ ರೀತಿಯ ವಿವರಣೆ ಅಥವಾ ಮಾಹಿತಿ ಕೇಳಿಲ್ಲ’ ಎಂದು ಹೇಳಿದರು.

ADVERTISEMENT

‘ಪ್ರಧಾನಿ ಭೇಟಿಗೆ ಗುರುವಾರ ಸಮಯ ನಿಗದಿಯಾಗಿದೆ. ಗೃಹ ಸಚಿವರು ಮತ್ತು ಪಕ್ಷದ ಅಧ್ಯಕ್ಷರ ಭೇಟಿಯೂ ನಿಗದಿ ಆಗಲಿದೆ’ ಎಂದು ಬೊಮ್ಮಾಯಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.