ಬೆಂಗಳೂರು: ‘ಆಪರೇಷನ್ ಸಿಂಧೂರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಶಾಸಕ ಕೊತ್ತನೂರು ಮಂಜುನಾಥ್ ಅವರನ್ನು ಕಾಂಗ್ರೆಸ್ ಪಕ್ಷವು ತಕ್ಷಣವೇ ವಜಾ ಮಾಡಬೇಕು’ ಎಂದು ವಿಧಾನ ಪರಿಷತ್‌ನ ಜೆಡಿಎಸ್ ಸದಸ್ಯ ಟಿ.ಎ.ಶರವಣ ಆಗ್ರಹಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಪಹಲ್ಗಾಮ್‌ನಲ್ಲಿ ಭಾರತೀಯ ಮಹಿಳೆಯರ ಕುಂಕುಮ ಅಳಿಸಿದ ಉಗ್ರರ ರಾಕ್ಷಸೀ ಕೃತ್ಯಕ್ಕೆ ತಕ್ಕ ಎದಿರೇಟು ನೀಡಲು ಆಪರೇಶನ್ ಸಿಂಧೂರ ನಡೆಸಲಾಗಿದೆ ಎಂಬುದು ಇಡೀ ಜಗತ್ತಿಗೆ ಗೊತ್ತಿದೆ. ಅದನ್ನು ಮಂಜುನಾಥ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್‌ನ ನಿಲುವು ಸಹ ಇದೇನಾ ಎಂಬುದನ್ನು ಪಕ್ಷವು ಸ್ಪಷ್ಟಪಡಿಸಬೇಕು’ ಎಂದಿದ್ದಾರೆ.
‘ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವ ಸಾಮರ್ಥ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ. ರಾಜ್ಯದ ಗುಪ್ತಚರ ಇಲಾಖೆ ವಿಫಲವಾಗಿದೆ. ಅಂಥದ್ದರಲ್ಲಿ ಕಾಂಗ್ರೆಸ್ ಶಾಸಕರು ದೇಶದ ಸೇನೆಯ ಬಗ್ಗೆ ಮಾತನಾಡುತ್ತಾರೆ. ಇವರಿಗೆ ಯಾವ ನೈತಿಕತೆ ಇದೆ’ ಎಂದು ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.