ADVERTISEMENT

ಅನರ್ಹತೆ: ‘ಸುಪ್ರೀಂ’ ವಿಚಾರಣೆ ಶುಕ್ರವಾರ

​ಪ್ರಜಾವಾಣಿ ವಾರ್ತೆ
Published 6 ಆಗಸ್ಟ್ 2019, 20:05 IST
Last Updated 6 ಆಗಸ್ಟ್ 2019, 20:05 IST
   

ನವದೆಹಲಿ: ಪಕ್ಷಾಂತರ ನಿಷೇಧ ಕಾಯ್ದೆ ಅಡಿ ರಾಜ್ಯದ 17 ಜನರ ವಿಧಾನಸಭೆ ಸದಸ್ಯತ್ವವನ್ನು ಅನರ್ಹಗೊಳಿಸಿರುವ ಸ್ಪೀಕರ್‌ ಆದೇಶದ ಸಿಂಧುತ್ವ ಪ್ರಶ್ನಿಸಿರುವ ಮೇಲ್ಮನವಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಇದೇ 9ರಂದು ಶುಕ್ರವಾರ ಕೈಗೆತ್ತಿಕೊಳ್ಳಲಿದೆ.

ಕಾಂಗ್ರೆಸ್‌ ಮತ್ತು ಜೆಡಿಎಸ್‌ ಶಾಸಕ ಸ್ಥಾನದಿಂದ ಅನರ್ಹತೆಗೆ ಒಳಗಾಗಿರುವವರ ಮೇಲ್ಮನವಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಪೀಠ ನಡೆಸಲಿದೆ.15 ಜನ ಕಳೆದ ಗುರುವಾರ ಹಾಗೂ ಇಬ್ಬರು ಜುಲೈ 29ರಂದು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT