ADVERTISEMENT

ಯಡಿಯೂರಪ್ಪ ಅಸಮರ್ಥ ಸಿಎಂ, ಅಸಮತೋಲನ ಸಂಪುಟದಿಂದ ಅಸಮಾಧಾನ ಏಳುತ್ತದೆ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2020, 6:53 IST
Last Updated 8 ಫೆಬ್ರುವರಿ 2020, 6:53 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಕಲಬುರ್ಗಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸ್ವಾತಂತ್ರ್ಯವಿಲ್ಲ. ಸಂಪುಟ ವಿಸ್ತರಣೆಯಲ್ಲೂ ಅವರನ್ನು ಇನ್ಯಾರೋ ಆಟವಾಡಿಸುತ್ತಿದ್ದಾರೆ. ಈಗಿನ ಸಚಿವ ಸಂಪುಟ ಅಸಮತೋಲನದಿಂದ ಕೂಡಿದೆ. ಇದು ಸರ್ಕಾರದಲ್ಲಿ ಅಸಮಾಧಾನಕ್ಕೆ ಕಾರಣವಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಕಲಬುರ್ಗಿಯಲ್ಲಿ ಶುಕ್ರವಾರ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು, ಶನಿವಾರ ಮುಂಜಾನೆ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ. ರಾಜ್ಯದ 13 ಜಿಲ್ಲೆಗಳಿಗೆ ಸಚಿವ ಸ್ಥಾನದ ಪ್ರಾತಿನಿಧ್ಯವೇ ಸಿಕ್ಕಿಲ್ಲ.‌ ಸಾಮಾಜಿಕ ನ್ಯಾಯವೂ ಇಲ್ಲ ಎಂದು ಟೀಕಿಸಿದರು.

ADVERTISEMENT

ದೆಹಲಿ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬವಾಗಿದೆ. ಅಧ್ಯಕ್ಷರ ನೇಮಕದಲ್ಲಿ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ.‌ ನನ್ನ ಅಭಿಪ್ರಾಯವನ್ನು ಹೈಕಮಾಂಡ್‌ಗೆ ತಿಳಿಸಿದ್ದೇನೆ. ನೇಮಕದ ದಿನಾಂಕವನ್ನು ನಾವು ನಿಗದಿ ಮಾಡುವುದಕ್ಕೆ ಆಗುವುದಿಲ್ಲ. ಅದು ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.