ADVERTISEMENT

ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 21:58 IST
Last Updated 25 ಜುಲೈ 2021, 21:58 IST
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್   

ಬೆಂಗಳೂರು: ‘ನೆರೆ, ಕೋವಿಡ್‌ನಿಂದ ಜೀವ ಹಾಗೂ ಜೀವನ ಉಳಿಸಿಕೊಳ್ಳಲು ಪರದಾಡುತ್ತಿರುವ ಜನರನ್ನು ರಕ್ಷಣೆ ಮಾಡಲು ರಾಜ್ಯ ಸರ್ಕಾರ ವಿಫಲವಾಗಿದೆ. ಹೀಗಾಗಿ, ವಿಧಾನಸಭೆ ವಿಸರ್ಜಿಸಿ ಜನರ ಮುಂದೆ ಹೋಗೋಣ. ಜನರ ತೀರ್ಪಿನ ಪ್ರಕಾರ ಹೊಸ ಆಡಳಿತ ಬರಲಿ’ ಎಂದು ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸವಾಲು ಹಾಕಿದರು.

ಕೋವಿಡ್‌ ಸಂಬಂಧಿಸಿದಂತೆ ರಾಜ್ಯಮಟ್ಟದ ಕಾಂಗ್ರೆಸ್ ಮೇಲ್ವಿಚಾರಣಾ ಸಮಿತಿ ವರದಿಯನ್ನು ಭಾನುವಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ಥಾನ ಏನಾಗುತ್ತದೋ ಆ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT