ADVERTISEMENT

ಅಕ್ರಮ ಗಣಿಗಾರಿಕೆ ತಡೆ: ಜಿಲ್ಲಾಧಿಕಾರಿಗೆ ಅಧಿಕಾರ

​ಪ್ರಜಾವಾಣಿ ವಾರ್ತೆ
Published 24 ಜನವರಿ 2021, 18:57 IST
Last Updated 24 ಜನವರಿ 2021, 18:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

-ಮಂಡ್ಯ ಜಿಲ್ಲೆ ಪಾಂಡವ ಪುರದ ಬೇಬಿಬೆಟ್ಟದಲ್ಲಿ ಅಕ್ರಮ ಗಣಿಗಾರಿಕೆಯಿಂದ ಕೆಆರ್‌ಎಸ್‌ ಜಲಾಶಯಕ್ಕೆ ಅಪಾಯ ಎದುರಾಗಿದೆ. ಬೇಬಿಬೆಟ್ಟ ಸೇರಿದಂತೆ ರಾಜ್ಯದಲ್ಲಿ ಎಲ್ಲ ಅಕ್ರಮ ಗಣಿಗಾರಿಕೆಗಳನ್ನೂ ತಕ್ಷಣ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ
ಗಳಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಅವರು ಭಾನುವಾರ ಸುದ್ದಿಗಾರರ ಜತೆ ಮಾತನಾಡಿದರು.

ಅಕ್ರಮ ಗಣಿಗಾರಿಕೆಗೆ ಅವಕಾಶ ನೀಡಬಾರದು. ಪರವಾನಗಿಗೆ ಅರ್ಜಿ ಸಲ್ಲಿಸಿದ ಬಳಿಕ, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಕಾನೂನು ಚೌಕಟ್ಟಿನಲ್ಲಿ ಅನುಮತಿ ನೀಡಬಹುದು. ಅಕ್ರಮ ಕಂಡುಬಂದರೆ ಅಧಿಕಾರಿಗ ಳನ್ನೇ ಹೊಣೆ ಮಾಡಲಾಗುವುದು. ಸಾಂಪ್ರದಾಯಿಕವಾಗಿ ಕಲ್ಲುಗಳನ್ನು ಒಡೆದು ಜಲ್ಲಿ ಮಾಡುವವರನ್ನು ಪ್ರೋತ್ಸಾಹಿಸಬೇಕು. ಅಭಿವೃದ್ಧಿ ಕಾಮಗಾರಿಗಳಿಗೆ ಜಲ್ಲಿಯ ಕೊರತೆಯಾಗದಂತೆ ನೋಡಿ ಕೊಳ್ಳಬೇಕು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.