ADVERTISEMENT

ಜಿಲ್ಲೆಗಳಲ್ಲೂ ಸರ್ಕಾರದಿಂದಲೇ ಅಸ್ಥಿ ವಿಸರ್ಜನೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 23:04 IST
Last Updated 3 ಜೂನ್ 2021, 23:04 IST

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟವರ ಅಸ್ಥಿಯನ್ನು ಅವರ ವಾರಸುದಾರರು 15 ದಿನಗಳೊಳಗೆ ಪಡೆಯದಿದ್ದರೆ ಸರ್ಕಾರದಿಂದಲೇ ಗೌರವಯುತವಾಗಿ ಅಸ್ಥಿ ವಿಸರ್ಜಿಸುವ ಕ್ರಮವನ್ನು ಎಲ್ಲ ಜಿಲ್ಲೆಗಳಲ್ಲೂ ಜಾರಿಗೆ ತರುವಂತೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ್‌ ಪ್ರಸಾದ್‌ ಗುರುವಾರ ಆದೇಶ ಹೊರಡಿಸಿದ್ದಾರೆ.

ಎಲ್ಲ ಜಿಲ್ಲೆಗಳಲ್ಲೂ ಕೋವಿಡ್‌ನಿಂದ ಮೃತಪಟ್ಟವರ ಶವಗಳನ್ನು ದಹಿಸಿದ ಬಳಿಕ 15 ದಿನಗಳವರೆಗೂ ಅಸ್ಥಿಯನ್ನು ಕಾಯ್ದಿರಿಸಬೇಕು. ಅಲ್ಲಿಯವರೆಗೂ ವಾರಸುದಾರರು ಬಂದು ಅಸ್ಥಿ ಪಡೆಯದಿದ್ದರೆ ಜಿಲ್ಲಾಧಿಕಾರಿ, ಉಪ ವಿಭಾಗಾಧಿಕಾರಿ ಮತ್ತು ತಹಶೀಲ್ದಾರರು ಗೌರವಯುತವಾಗಿ ವಿಸರ್ಜಿಸಬೇಕು ಎಂದು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT