ADVERTISEMENT

ಜಿಲ್ಲಾ ಉಸ್ತುವಾರಿ ನೇಮಕ: ಬೆಳಗಾವಿಗೆ ರಮೇಶ್‌ ಜಾರಕಿಹೊಳಿ, ಹಾಸನಕ್ಕೆ ಗೋಪಾಲಯ್ಯ

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 11:06 IST
Last Updated 2 ಜೂನ್ 2020, 11:06 IST
ಸಚಿವರಾದ ರಮೇಶ್‌ ಜಾರಕಿಹೊಳಿ ಮತ್ತು ಕೆ.ಗೋಪಾಲಯ್ಯ
ಸಚಿವರಾದ ರಮೇಶ್‌ ಜಾರಕಿಹೊಳಿ ಮತ್ತು ಕೆ.ಗೋಪಾಲಯ್ಯ   

ಬೆಂಗಳೂರು: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮತ್ತು ಆಹಾರ ಸಚಿವ ಕೆ.ಗೋಪಾಲಯ್ಯ ಅವರನ್ನು ಹಾಸನ ಜಿಲ್ಲೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಲಾಗಿದೆ.

ಈ ಹಿಂದೆ ಬೆಳಗಾವಿ ಜಿಲ್ಲೆ ಉಸ್ತುವಾರಿಯನ್ನು ಜಗದೀಶ ಶೆಟ್ಟರ್‌ ಮತ್ತು ಹಾಸನ ಜಿಲ್ಲಾ ಉಸ್ತುವಾರಿಯನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರಿಗೆ ನೀಡಲಾಗಿತ್ತು.

ರಾಜಕೀಯವಾಗಿ ಪ್ರಭಾವಿ ಜಿಲ್ಲೆ ಎನಿಸಿರುವ ಬೆಳಗಾವಿ ಜಿಲ್ಲೆಗೆ ಜಗದೀಶ ಶೆಟ್ಟರ್‌‌ ಅವರನ್ನು ನೇಮಕ ಮಾಡಿದಾಗ ರಮೇಶ ಜಾರಕಿಹೊಳಿಗೆ ಹಿನ್ನಡೆ ಎಂದೇ ವ್ಯಾಖ್ಯಾನಿಸಲಾಗಿತ್ತು. ಬಿಜೆಪಿ ಸೇರುವುದಕ್ಕೆ ಮೊದಲೇ ಜಲಸಂಪನ್ಮೂಲ ಖಾತೆ ಮತ್ತು ಜಿಲ್ಲಾ ಉಸ್ತುವಾರಿಗೆ ಬೇಡಿಕೆ ಇಟ್ಟಿದ್ದರು. ಇದೀಗ ಅವರು ಬಯಸಿದಂತೆ ಜಿಲ್ಲಾ ಉಸ್ತುವಾರಿಯೂ ಸಿಕ್ಕಿದೆ.

ADVERTISEMENT

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರಿಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಮೇಲೆ ಕಣ್ಣಿತ್ತು. ಸಚಿವೆ ಶಶಿಕಲಾ ಜೊಲ್ಲೆ ಅವರೂ ಇದೇ ಜಿಲ್ಲೆಗೆ ಸೇರಿದವರು. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಜಾರಕಿಹೊಳಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದಾರೆ ಎಂದು ರಾಜಕೀಯ ವಲಯದಲ್ಲಿ ವಿಶ್ಲೇಷಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.