
ರೈಲು ಸಂಚಾರ– ಸಾಂದರ್ಭಿಕ ಚಿತ್ರ
ಕಲಬುರಗಿ: ದೀಪಾವಳಿ ಹಬ್ಬದಲ್ಲಿ ಉಂಟಾಗುವ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು ನೈರುತ್ಯ ರೈಲ್ವೆಯು ಅಕ್ಟೋಬರ್ 18ರಿಂದ 22ರವರೆಗೆ ಬೆಂಗಳೂರು–ಕಲಬುರಗಿ ಮಧ್ಯೆ ವಿಶೇಷ ರೈಲುಗಳನ್ನು ಓಡಿಸಲಿದೆ.
ಅಕ್ಟೋಬರ್ 18ರಂದು ಬೆಂಗಳೂರು ಕಂಟೋನ್ಮೆಂಟ್‌ನಿಂದ (06203) ರಾತ್ರಿ 7.40ಕ್ಕೆ ಹೊರಡುವ ರೈಲು 19ರಂದು ಬೆಳಿಗ್ಗೆ 7.30ಕ್ಕೆ ಕಲಬುರಗಿ ತಲುಪಲಿದೆ.
ಕಲಬುರಗಿಯಿಂದ ಅಕ್ಟೋಬರ್ 19ರಂದು ಬೆಳಿಗ್ಗೆ 9.30ಕ್ಕೆ ಹೊರಡುವ ರೈಲು (06204) ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.
ಅಕ್ಟೋಬರ್ 20ರಂದು ರಾತ್ರಿ 7.40ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಡುವ ರೈಲು (06207) 21ರಂದು ಬೆಳಿಗ್ಗೆ 7.30ಕ್ಕೆ ಕಲಬುರಗಿ ತಲುಪಲಿದೆ. ಅಕ್ಟೋಬರ್ 21ರಂದು ಮಂಗಳವಾರ ಬೆಳಿಗ್ಗೆ 9.35ಕ್ಕೆ ಕಲಬುರಗಿಯಿಂದ ಹೊರಡುವ ರೈಲು (06204) ಅದೇ ದಿನ ರಾತ್ರಿ 8.30ಕ್ಕೆ ಯಶವಂತಪುರ ತಲುಪಲಿದೆ.
ಅಕ್ಟೋಬರ್ 21ರಂದು ರಾತ್ರಿ 10.10ಕ್ಕೆ ಬೆಂಗಳೂರು ಕಂಟೋನ್ಮೆಂಟ್‌ನಿಂದ ಹೊರಡುವ ರೈಲು (06209) ಅಕ್ಟೋಬರ್ 22ರಂದು ಬೆಳಿಗ್ಗೆ 9ಕ್ಕೆ ಕಲಬುರಗಿಗೆ ಬರಲಿದೆ. ಅಕ್ಟೋಬರ್ 22ರಂದು ಬೆಳಿಗ್ಗೆ 10.45ಕ್ಕೆ ಕಲಬುರಗಿಯಿಂದ ಹೊರಡುವ ರೈಲು (06210) ಅದೇ ದಿನ ರಾತ್ರಿ 10.30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಈ ರೈಲು ಬೆಂಗಳೂರು ಕಂಟೋನ್ಮೆಂಟ್, ಯಶವಂತಪುರ, ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಮಂತ್ರಾಲಯ, ರಾಯಚೂರು, ಕೃಷ್ಣಾ, ಯಾದಗಿರಿ, ವಾಡಿ, ಶಹಾಬಾದ್ ಮೂಲಕ ಕಲಬುರಗಿ ತಲುಪಲಿದೆ. ವಿಶೇಷ ರೈಲು ಆಗಿರುವುದರಿಂದ ತತ್ಕಾಲ್ ಟಿಕೆಟ್ ದರವನ್ನು ಆಕರಿಸಲಾಗುತ್ತದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.