ಹುಬ್ಬಳ್ಳಿ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿಭಾಯಿಸಲು ಬೆಂಗಳೂರು, ಹುಬ್ಬಳ್ಳಿ, ವಿಜಯಪುರ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೆ ನಿರ್ಧರಿಸಿದೆ.
ಎಸ್ಎಸ್ಎಸ್ ಹುಬ್ಬಳ್ಳಿ–ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು (07345) ಅ. 17ರಂದು ಹುಬ್ಬಳ್ಳಿಯಿಂದ ಬೆಳಿಗ್ಗೆ 11 ಗಂಟೆಗೆ ಹೊರಟು, ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ತಲುಪಲಿದೆ. ಮಾರ್ಗದಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ, ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
ಎಸ್ಎಂವಿಟಿ ಬೆಂಗಳೂರು– ವಿಜಯಪುರ ವಿಶೇಷ ಎಕ್ಸ್‌ಪ್ರೆಸ್ ರೈಲು (06245) ಅ.17ರಂದು ಬೆಂಗಳೂರಿನಿಂದ ರಾತ್ರಿ 10 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪಲಿದೆ. ಇದೇ ರೈಲು (06246) ಅ.22ರಂದು ವಿಜಯಪುರದಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 11.15ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಈ ಎರಡೂ ರೈಲುಗಳು ಮಾರ್ಗದಲ್ಲಿ ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ, ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆ ಇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.