
ಡಿಕೆಶಿ
ನವದೆಹಲಿ: ‘ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ಪ್ರತಿ ಕ್ಷೇತ್ರದಲ್ಲಿಯೂ ಐದು ಕಿ.ಮೀ. ಪಾದಯಾತ್ರೆ ನಡೆಸಲಾಗುವುದು. ಪಂಚಾಯಿತಿ ಮಟ್ಟದಲ್ಲಿ ನಿರ್ಣಯ ತೆಗೆದುಕೊಳ್ಳಲಾಗುವುದು’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಭಾನುವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಹೋರಾಟದ ರೂಪುರೇಷೆ ನಿರ್ಧರಿಸಲು ಎಲ್ಲ ಪಿಸಿಸಿ ಅಧ್ಯಕ್ಷರುಗಳ ಸಭೆ ಕರೆಯಲಾಗಿತ್ತು. ರಾಜ್ಯದಿಂದ ನಾನು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಸಭೆಯಲ್ಲಿ ಭಾಗವಹಿಸಿದ್ದೆವು. ಪಾದಯಾತ್ರೆ ವಿಚಾರ ಹಾಗೂ ಹೋರಾಟ ಮಾದರಿ ಬಗ್ಗೆ ಈ ಮೊದಲೇ ತಿಳಿಸಲಾಗಿತ್ತು. ಭಾನುವಾರದ ಸಭೆಯಲ್ಲಿ ತೀರ್ಮಾನ ಮಾಡಲಾಯಿತು’ ಎಂದರು.
‘ಮನರೇಗಾ ಹೆಸರು ಬದಲಾವಣೆ ವಿರೋಧಿಸಿ ನಾವು ಹೋರಾಟ ಮಾಡುತ್ತೇವೆ. ಪಂಚಾಯತಿ ಸದಸ್ಯರ ಸಭೆ ಈಗಾಗಲೇ ನಡೆಸಲಾಗಿದೆ. ಶಾಸಕರ, ವಿಧಾನಪರಿಷತ್ ಸದಸ್ಯರ, ಪಕ್ಷದ ಪದಾಧಿಕಾರಿಗಳ, ಸಂಸದರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸಭೆ ನಡೆಸಲಾಗಿದೆ. ಸಂಘಟನಾ ಕಾರ್ಯದರ್ಶಿ, ರಾಜ್ಯ ಉಸ್ತುವಾರಿಯವರು ರಾಜ್ಯಕ್ಕೆ ಭೇಟಿ ನೀಡುವ ಸೂಚನೆ ನೀಡಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.