
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಿಗೆ ವ್ಯಾಪಕವಾಗಿ ಪ್ರಚಾರ ನೀಡುವ ಉದ್ದೇಶದಿಂದ ‘ಪ್ರತಿ ಮನೆಗೆ ಐದು ಗ್ಯಾರಂಟಿಗಳು. ಮನೆ ಮುಂದೆ ರಂಗೋಲಿ’ ಎಂಬ ಶೀರ್ಷಿಕೆಯಡಿ ರಂಗೋಲಿ ಹಾಕುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಇದೇ 28 ರಂದು ಬೆಳಿಗ್ಗೆ 15 ಸಾವಿರ ರಂಗೋಲಿಗಳನ್ನು ಹಾಕುವ ಕಾರ್ಯಕ್ರಮವನ್ನು ಕನಕಪುರ ನಗರದಲ್ಲಿ ಏರ್ಪಡಿಸಲಾಗಿದೆ. ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದೂ ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.