ADVERTISEMENT

ಮತಪತ್ರ ಬಳಕೆ | ಬಿಜೆಪಿ ಅವಧಿಯಲ್ಲೇ ಕಾನೂನು: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 16:05 IST
Last Updated 11 ಸೆಪ್ಟೆಂಬರ್ 2025, 16:05 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌   

ಬೆಂಗಳೂರು: ‘ಬಿಜೆಪಿ ಅಧಿಕಾರದಲ್ಲಿ ಇದ್ದಾಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಿ ಕಾನೂನು ತಂದಿತ್ತು’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಮತಪತ್ರ ಬಳಕೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಚುನಾವಣಾ ಆಯೋಗದ ಕಾಯ್ದೆಯ ಉಪಬಂಧದಲ್ಲಿ ಮತಪತ್ರ ಬಳಸಲು ಅವಕಾಶ ಕಲ್ಪಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾಯ್ದೆ ಜಾರಿಗೆ ತರುವಾಗ, ಬಿಜೆಪಿ ಮಾಡಿದ್ದ ಕಾಯ್ದೆಯನ್ನೇ ಮುಂದುವರಿಸಿದ್ದೇವೆ’ ಎಂದರು.

‘ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತಪತ್ರ ಬಳಕೆ ಮಾಡಿದರೆ ತಪ್ಪೇನೂ ಅಲ್ಲ’ ಎಂದೂ ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.