ADVERTISEMENT

ಬಿಜೆಪಿಯವರಿಗೆ ಇಚ್ಚಾಶಕ್ತಿ ಇದ್ದರೆ ಯೋಜನೆಗಳಿಗೆ ಹಣ ಕೊಡಿಸಲಿ: ಡಿ.ಕೆ.ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2025, 15:44 IST
Last Updated 31 ಆಗಸ್ಟ್ 2025, 15:44 IST
<div class="paragraphs"><p>ಡಿ.ಕೆ ಶಿವಕುಮಾರ್</p></div>

ಡಿ.ಕೆ ಶಿವಕುಮಾರ್

   

ಬೆಂಗಳೂರು: ‘ಬಿಜೆಪಿಯವರಿಗೆ ರಾಜಕೀಯ ಇಚ್ಚಾಶಕ್ತಿ ಇದ್ದರೆ ಭದ್ರಾ ಮೇಲ್ದಂಡೆ ಯೋಜನೆ, ಬೆಂಗಳೂರು ಅಭಿವೃದ್ಧಿಗೆ ಹಣ ಕೊಡಿಸಲಿ. ಮೇಕೆದಾಟು, ಮಹದಾಯಿ ಯೋಜನೆಗೆ ಅನುಮತಿ ಕೊಡಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಬಿಜೆಪಿ ಹಮ್ಮಿಕೊಂಡಿರುವ ಧರ್ಮಸ್ಥಳ ಯಾತ್ರೆಯ ಬಗ್ಗೆ ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಧರ್ಮಸ್ಥಳ ಬದಲು ದೆಹಲಿಯಲ್ಲಿ ಹೋರಾಟ ಮಾಡಲಿ’ ಎಂದರು.

ADVERTISEMENT

‘ಬಿಜೆಪಿಯವರು ಧರ್ಮಸ್ಥಳಕ್ಕೆ ಹೋಗಿ ತಮ್ಮ ವೈಯಕ್ತಿಕ ಲಾಭಕ್ಕೆ ಪ್ರಾರ್ಥನೆ ಮಾಡಿಕೊಂಡು ಬರುತ್ತಾರೆಯೇ ಹೊರತು ಬೇರೇನೂ ಇಲ್ಲ. ಅವರ ಹೋರಾಟ ಧರ್ಮಸ್ಥಳದಲ್ಲಿ ಅಲ್ಲ, ಎಲ್ಲ ಸಂಸದರು, ಶಾಸಕರನ್ನು ಕರೆದುಕೊಂಡು ಹೋಗಿ ದೆಹಲಿಯಲ್ಲಿ ಹೋರಾಟ ಮಾಡಬೇಕು. ರಾಜ್ಯಕ್ಕೆ ಅನುದಾನ ತರಬೇಕು’ ಎಂದು ಛೇಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.