
ಪ್ರಜಾವಾಣಿ ವಾರ್ತೆ
ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮಾತುಕತೆ
ಬೆಂಗಳೂರು: ‘ಸಿದ್ದರಾಮಯ್ಯ ಅವರಿಗೆ ಯಶಸ್ಸು ಸಿಗಲಿ. ಜನರ ಸೇವೆ ಮಾಡುವ ಅವಕಾಶವನ್ನು ಭಗವಂತ ಅವರಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ದಾಖಲೆ ನಿರ್ಮಿಸುತ್ತಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಅವರು ಮೇಲಿನಂತೆ ಪ್ರತಿಕ್ರಿಯಿಸಿದರು.
‘ಅವಧಿ ಪೂರೈಸುವ ವಿಶ್ವಾಸವಿದೆ’ ಎಂದು ಸಿದ್ದರಾಮಯ್ಯನವರ ಹೇಳಿದ್ದಾರಲ್ಲ ಎಂದಾಗ, ‘ಅವರಿಗೆ ಒಳ್ಳೆಯದಾಗಲಿ. ನಾನು ಅವರಿಗೆ ಶುಭ ಹಾರೈಸುತ್ತೇನೆ’ ಎಂದರು.
‘ಈ ಹೇಳಿಕೆಯಿಂದ ಮತ್ತೆ ಗೊಂದಲ ಆಗುವುದಿಲ್ಲವೇ’ ಎಂದು ಕೇಳಿದಾಗ, ‘ನೀವು (ಮಾಧ್ಯಮಗಳು) ಗೊಂದಲ ಮಾಡಿಕೊಳ್ಳುತ್ತಿದ್ದೀರಿ. ನಮ್ಮಲ್ಲಿ ಯಾರಿಗೂ ಗೊಂದಲವಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.