
ಪ್ರಜಾವಾಣಿ ವಾರ್ತೆ
ಬೆಂಗಳೂರು: ಸ್ವಿಟ್ಜರ್‌ಲೆಂಡ್‌ನ ದಾವೋಸ್‌ನಲ್ಲಿ ಇದೇ 19 ರಿಂದ ನಡೆಯಲಿರುವ ವಿಶ್ವ ಆರ್ಥಿಕ ಶೃಂಗಸಭೆಗೆ ತೆರಳದಿರಲು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ.
ಬೆಂಗಳೂರು ಮತ್ತು ನವದೆಹಲಿಯಲ್ಲಿ ಈಗಾಗಲೇ ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಉದ್ದೇಶದಿಂದ ದಾವೋಸ್ ಪ್ರವಾಸವನ್ನು ಶಿವಕುಮಾರ್ ರದ್ದುಪಡಿಸಿದ್ದಾರೆ ಎಂದು ಉಪ ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.
ಎಐಸಿಸಿ ನಾಯಕರ ಜೊತೆ ಸರಣಿ ಸಭೆಗಳು, ನರೇಗಾ ಕಾಯ್ದೆ ಮರು ಜಾರಿಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಅಭಿಯಾನ ಮತ್ತು ಇದೇ 22ರಿಂದ ನಡೆಯಲಿರುವ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ಶಿವಕುಮಾರ್ ಭಾಗವಹಿಸಲಿದ್ದಾರೆ. ಹೀಗಾಗಿ, ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದೂ ಮೂಲಗಳು ಹೇಳಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.