ADVERTISEMENT

ಡಿ.ಕೆ.ಶಿವಕುಮಾರ್ ಪ್ರಕರಣ: ಇಸಿಐಆರ್‌ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 20:04 IST
Last Updated 14 ಮಾರ್ಚ್ 2019, 20:04 IST
   

ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಜಾರಿಗೊಳಿಸಿರುವ ಸಮನ್ಸ್ ಪ್ರಶ್ನಿಸಿದ ಪ್ರಕರಣದಲ್ಲಿ ಹೈಕೋರ್ಟ್‌ಗೆ, ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್‌) ಸಲ್ಲಿಸಲಾಗಿದೆ.

‘₹ 8.60 ಕೋಟಿ ಪತ್ತೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗಬೇಕು’ ಎಂದು ಇ.ಡಿ ನೀಡಿರುವ ಸಮನ್ಸ್ ರದ್ದು ಕೋರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಐವರು ಆರೋಪಿಗಳು ಸಲ್ಲಿಸಿರುವ ರಿಟ್‌ ಅರ್ಜಿಗಳ ವಿಚಾರಣೆಯನ್ನು ನ್ಯಾಯಪೀಠ ಗುರುವಾರ ನಡೆಸಿತು.

ಇ.ಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಪ್ರಭುಲಿಂಗ ಕೆ.ನಾವದಗಿ, ‘ತನಿಖೆ ಇನ್ನೂ ಬಾಕಿ ಇದೆ. ಸಮನ್ಸ್ ರದ್ದು ಮಾಡಿ ಎಂಬುದು ಪರಿಪಕ್ವ ಕೋರಿಕೆಯಲ್ಲ’ ಎಂದರು.

ADVERTISEMENT

ವಿಚಾರಣೆಯನ್ನು ಇದೇ 18ಕ್ಕೆ ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.