ADVERTISEMENT

ಡಿ.ಕೆ.ಶಿವಕುಮಾರ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 16:04 IST
Last Updated 4 ಜುಲೈ 2025, 16:04 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಡಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹೈಕೋರ್ಟ್‌ ತಡೆ ನೀಡಿದೆ.

ಈ ಸಂಬಂಧ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಕ್ರಿಮಿನಲ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್‌.ಆರ್‌.ಕೃಷ್ಣಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಈ ಕುರಿತಂತೆ ಆದೇಶಿಸಿದೆ.

ಡಿ.ಕೆ.ಶಿವಕುಮಾರ್‌ ಪರ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ ವಾದ ಮಂಡಿಸಿದರು. ಹೈಕೋರ್ಟ್‌ ವಕೀಲ ಎಲ್‌.ಸೂರ್ಯ ಮುಕುಂದರಾಜ್‌ ವಕಾಲತ್ತು ವಹಿಸಿದ್ದಾರೆ. ಕೆಪಿಸಿಸಿ ಪರವಾಗಿ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಎಸ್‌.ಎ.ಅಹಮದ್ ಹಾಗೂ ವಕಾಲತ್ತು ವಹಿಸಿರುವ ಸಂಜಯ್‌ ಯಾದವ್‌ ಹಾಜರಿದ್ದರು.

ADVERTISEMENT

ಪ್ರಕರಣವೇನು?:

‘ಕರ್ನಾಟಕ ವಿಧಾನಸಭೆಗೆ 2023ರಲ್ಲಿ ನಡೆದ ಚುನಾವಣೆ ವೇಳೆ, ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪಕ್ಷವು ರಾಷ್ಟ್ರೀಯ ಮತ್ತು ರಾಜ್ಯದ ಪ್ರಮುಖ ದಿನಪತ್ರಿಕೆಗಳಲ್ಲಿ 2023ರ ಮೇ 5ರಂದು ಜಾಹೀರಾತು ನೀಡಿತ್ತು. ಇದರಲ್ಲಿ ಆಡಳಿತಾರೂಢ ರಾಜ್ಯ ಬಿಜೆಪಿ ಸರ್ಕಾರ ಶೇ 40ರಷ್ಟು ಕಮಿಷನ್‌ ಸರ್ಕಾರ. ಇದು ಕಳೆದ ನಾಲ್ಕು ವರ್ಷಗಳಲ್ಲಿ ₹1.50 ಲಕ್ಷ ಕೋಟಿ ಲೂಟಿ ಹೊಡೆದಿರುವ ಭ್ರಷ್ಟ ಸರ್ಕಾರ’ ಎಂದು ಆರೋಪಿಸಿ ಬಿಜೆಪಿಯ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಬಿ.ಎಸ್‌.ಕೇಶವಪ್ರಸಾದ್‌ ಸಲ್ಲಿಸಿರುವ ಖಾಸಗಿ ದೂರು ದಾಖಲಿಸಿದ್ದರು. ಇದರ ಆಧಾರದಡಿ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ (42ನೇ ಎಸಿಎಂಎಂ ಕೋರ್ಟ್‌) ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.