ADVERTISEMENT

ಯಾವ ಮನುಷ್ಯರೂ ಹೀಗೆ ಸಾಯುವುದನ್ನ ಖಂಡಿಸುತ್ತೇನೆ: ಖಮೇನಿ ಹತ್ಯೆ ಬಗ್ಗೆ ಡಿಕೆಶಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಮಾರ್ಚ್ 2026, 13:56 IST
Last Updated 1 ಮಾರ್ಚ್ 2026, 13:56 IST
<div class="paragraphs"><p>ಡಿ.ಕೆ.ಶಿವಕುಮಾರ್</p></div>

ಡಿ.ಕೆ.ಶಿವಕುಮಾರ್

   

ಬೆಂಗಳೂರು: ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.

ಈ ಕುರಿತು ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಅವರು, ಇರಾನ್‌ ಶಾಲೆ ಮೇಲೆ ವೈಮಾನಿಕ ದಾಳಿ ಖಂಡನೀಯ; ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಿ. ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ಈಗ ನಡೆಯುತ್ತಿರುವ ಯುದ್ಧ ಸರಿಯಲ್ಲ ಎಂದಿದ್ದಾರೆ.

ADVERTISEMENT

ವೈಮಾನಿಕ ದಾಳಿಯಲ್ಲಿ ಮಕ್ಕಳು ಸತ್ತಿದ್ದಾರೆ. ಏನೂ ಮಾಡದ ಮಕ್ಕಳ ಶಾಲೆ ಮೇಲೆ ಏಕೆ ದಾಳಿ ಮಾಡಬೇಕು. ಇದು ಖಂಡನೀಯ ಎಂದು ಹೇಳಿದ್ದಾರೆ.

ದುಬೈ ಸೇರಿದಂತೆ ಕೊಲ್ಲಿ ದೇಶಗಳಲ್ಲಿ ಸಿಲುಕಿರುವ ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಬೇಕು. ಕರ್ನಾಟಕ, ಕೇರಳ ಸೇರಿದಂತೆ ಭಾರತೀಯ ನಾಗರಿಕರನ್ನ ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರದ ಬಳಿ ಮನವಿ ಮಾಡಿದ್ದಾರೆ.

ನಾಗರಿಕರ ರಕ್ಷಣೆಗೆ ಏನೂ ಒತ್ತಡ ಹೇರಬೇಕೋ ಆ ಕೆಲಸವನ್ನು ನಾವು ಮಾಡುತ್ತೇವೆ. ಈ ಕಾರಣಕ್ಕೆ ಕಮಿಷನರ್ ಅವರಿಗೆ ಮುಖ್ಯಮಂತ್ರಿಯವರು ಸೇರಿದಂತೆ ನಾವು ನಿರ್ದೇಶನ‌ ನೀಡಿದ್ದೇವೆ. ಭಾರತೀಯರು, ಕನ್ನಡಿಗರಿಗೆ ಧೈರ್ಯ ತುಂಬುವ ಕೆಲಸ ನಾವು ಮಾಡುತ್ತೇವೆ. ಪ್ರಪಂಚದ ಯಾವ ಮನುಷ್ಯರು ಹೀಗೆ ಸಾಯುವುದನ್ನ ನಾನು ಖಂಡಿಸುತ್ತೇನೆ ಎಂದಿದ್ದಾರೆ.

ದುಬೈನಲ್ಲಿ ನಮ್ಮ ಶಾಸಕರಾದ ಎ.ಸಿ. ಶ್ರೀನಿವಾಸ್, ಭರತ್ ರೆಡ್ಡಿ ಅವರ ಕುಟುಂಬ, ಎಂ ಎಲ್ ಸಿ ಭೋಜೇಗೌಡ ಅವರು ಸಿಲುಕಿಕೊಂಡಿದ್ದಾರೆ. ಜೊತೆಗೆ ಅನೇಕ ನಾಗರಿಕರು ಸಿಲುಕಿಕೊಂಡಿದ್ದಾರೆ. ಇವರನ್ನೆಲ್ಲಾ ರಕ್ಷಣೆ ಮಾಡಬೇಕು. ದಕ್ಷಿಣ ಭಾರತದ ಅನೇಕರು ದುಬೈ, ಸೌದಿಯಲ್ಲಿದ್ದಾರೆ. ಅನೇಕ ಭಾರತೀಯ ವಿದ್ಯಾಸಂಸ್ಥೆಗಳಿವೆ. ಅಲ್ಲಿರುವ ಕನ್ನಡ ಸಂಘಟನೆಗಳು ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಅನೇಕ ಪರಿಚಿತರಿಂದ ವ್ಯಾಪಕವಾಗಿ ಕರೆಗಳು ಬರುತ್ತಿವೆ. ನಮ್ಮ ಜೊತೆ ವ್ಯವಹಾರ ನಡೆಸುವವರು, ಪರಿಚಿತರು ಗಾಬರಿಯಾಗಿದ್ದಾರೆ. ಸೌದಿಯಲ್ಲಿ ಏರ್ ಸ್ಟೈಕ್, ಕ್ಷಿಪಣಿಗಳು ಹಾರುತ್ತಿರುವುದು ಕಾಣುತ್ತಿದೆ ಎಂದು ಹೇಳಿದ್ದಾರೆ. ನಾನು ಆತಂಕ ಪಡುವುದು ಬೇಡ ಎಂದು ಹೇಳಿದ್ದೇನೆ. ನಾವು ಧೈರ್ಯ ತುಂಬುವಂತಹ ಕೆಲಸ ಮಾಡಬೇಕು ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.