ADVERTISEMENT

100 ಕಾಂಗ್ರೆಸ್ ಕಚೇರಿಗೆ ಜಾಗ ಕೊಡದವರ ಪಟ್ಟಿ ಹೈಕಮಾಂಡ್‌ಗೆ ಕೊಟ್ಟಿರುವೆ: ಡಿಕೆಶಿ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2025, 13:10 IST
Last Updated 9 ನವೆಂಬರ್ 2025, 13:10 IST
<div class="paragraphs"><p>ಡಿ.ಕೆ.ಶಿವಕುಮಾರ್</p></div>

ಡಿ.ಕೆ.ಶಿವಕುಮಾರ್

   

ಬೆಂಗಳೂರು: ‘ಗಾಂಧಿ ಭಾರತ’ದ ನೆನಪಿನಲ್ಲಿ ರಾಜ್ಯದಲ್ಲಿ 100 ಕಾಂಗ್ರೆಸ್ ಕಚೇರಿಗಳನ್ನು ಸ್ಥಾಪಿಸಲು ಕೆಲ ಶಾಸಕರು ಸೈಟ್ ನೀಡಿದ್ದಾರೆ. ನೀಡದವರ ಲಿಸ್ಟ್‌ ಅನ್ನು ಹೈಕಮಾಂಡ್ ಕೇಳಿದ್ದು ಲಿಸ್ಟ್ ಕಳುಹಿಸಿ ಕೊಟ್ಟಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಕೂಡ್ಲಿಗಿಯಲ್ಲಿ ಮಾತನಾಡಿದ ಅವರು, ವಿಜಯನಗರ,ಬಳ್ಳಾರಿ ಜಿಲ್ಲೆಯ ಹಲವು ಶಾಸಕರು ಕಾಂಗ್ರೆಸ್ ಕಚೇರಿಗೆ ನಿವೇಶನ ನೀಡಿದ್ದಾರೆ. ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಗಾಂಧಿ ಭಾರತದ ನೆನಪಿನಲ್ಲಿ 100 ಕಾಂಗ್ರೆಸ್ ಕಚೇರಿಗಳನ್ನು ಸ್ಥಾಪಿಸಲು ಕೆಲವರು ಸೈಟ್ ನೀಡಿಲ್ಲ. ಯಾರು ಸೈಟ್ ನೀಡಿಲ್ಲ ಅವರ ವರದಿಯನ್ನು ದೆಹಲಿಯಿಂದ ಕೇಳಿದ್ದಾರೆ. ವರದಿಯನ್ನು ಕೊಟ್ಟಿದ್ದೇನೆ ಎಂದು ಹೇಳಿದರು.

ADVERTISEMENT

ಬಿಜೆಪಿಗೆ ಟೀಕೆ: ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿ ಇದ್ದರೆ ಚೆಂದ. ದಾನ ಧರ್ಮ ಕೈ ಅಧಿಕಾರದಲ್ಲಿ ಇದ್ದರೆ ಚೆಂದ. ಹಸ್ತ ವಿರೋಧ ಪಕ್ಷದವರ ಬಾಯನ್ನು ಮುಚ್ಚಿದೆ, ಬೆಲೆ ಏರಿಕೆ ನಿಯಂತ್ರಣ ಮಾಡಿದೆ. ಈ ಹಸ್ತ ಐದು ಗ್ಯಾರಂಟಿ ಕೊಟ್ಟಿದೆ. ಈ ಹಸ್ತ ಗ್ಯಾರಂಟಿ ಮೂಲಕ ಕೈ ಗಟ್ಟಿ ಮಾಡಿದೆ. ಗ್ಯಾರಂಟಿ ಮೂಲಕ ಒಂದು ಲಕ್ಷ ಕೋಟಿ ಮನೆಗೆ ಕೊಟ್ಟಿದ್ದೇವೆ. ಬಿಜೆಪಿಯವರು ಇಂತಹ ಕಾರ್ಯವನ್ನು ಯಾವ ಕಾಲಕ್ಕೂ ಮಾಡಕ್ಕೆ ಆಗಲ್ಲ ಎಂದು ಡಿಕೆಶಿ ಹೇಳಿದರು.

ಬಿಜೆಪಿಯವರು ಮನೆ ನಿರ್ಮಾಣಕ್ಕೆ‌ ಒಂದು ಪೈಸೆ ಕೊಟ್ಟಿಲ್ಲ ಎಂದ ಅವರು, ಬೆಂಗಳೂರು ಸುತ್ತಮುತ್ತಲಿನ ಕೊಳಚೆ ನೀರನ್ನು ಕೆರೆಗಳಿಗೆ ತುಂಬಿಸಿ ಅಂತರ್ಜಲ ಹೆಚ್ಚಿಸುವ ಕೆಲಸ ಮಾಡುತ್ತೇವೆ ಎಂದರು.

ಜತೆಗಿದ್ದೇವೆ: ಇಡೀ ಸರ್ಕಾರ ಇಲ್ಲಿಗೆ ಬಂದಿದೆ. ನಾವು ಎಲ್ಲರೂ ಶ್ರೀನಿವಾಸ್ ಜೊತೆಗೆ ಇದ್ದೇವೆ ಎನ್ನುವುದನ್ನು ತೋರಿಸಿಕೊಟ್ಟಿದ್ದೇವೆ. ಟೀಕೆಗಳನ್ನು ಮರೆಯಬೇಕು,ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಇದೇ ನಮ್ಮ ಸರಕಾರದ ಕಲ್ಪನೆ. ಟೀಕೆಗಳು ಸಾಯುತ್ತವೆ,ಕೆಲಸಗಳು ಉಳಿಯುತ್ತವೆ ಎಂಬ ಮಾತನ್ನು ಪುನರುಚ್ವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.