ವಾಹನ ಪಲ್ಟಿ
ಶ್ರೀರಂಗಪಟ್ಟಣ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಅದರಲ್ಲಿದ್ದ ನಾಲ್ವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಶನಿವಾರ ನಡೆದಿದೆ.
ಮೈಸೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ ಮುಗಿಸಿ ಡಿ.ಕೆ. ಶಿವಕುಮಾರ್ ಬೆಂಗಳೂರಿಗೆ ತೆರಳುತ್ತಿದ್ದಾಗ, ಹಿಂದೆ ಬರುತ್ತಿದ್ದ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಘಟನೆಯಲ್ಲಿ ಬೆಂಗಾವಲು ವಾಹನದಲ್ಲಿದ್ದ ಬೆಂಗಳೂರಿನ ದಿನೇಶ್, ಮಹೇಶ್, ಜಯಲಿಂಗು ಮತ್ತು ಕಾರ್ತಿಕ್ ಎಂಬವರು ಗಾಯಗೊಂಡಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ
ಘಟನೆಯಲ್ಲಿ ಬೆಂಗಾವಲು ವಾಹನ ಭಾಗಶಃ ಜಖಂಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.