ADVERTISEMENT

ಕೋವಿಡ್: ಡಿ.ಕೆ. ಶಿವಕುಮಾರ್ ಗುಣಮುಖ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 19:18 IST
Last Updated 11 ಸೆಪ್ಟೆಂಬರ್ 2020, 19:18 IST
ಡಿ.ಕೆ. ಶಿವಕುಮಾರ್‌
ಡಿ.ಕೆ. ಶಿವಕುಮಾರ್‌   

ಬೆಂಗಳೂರು: ಕೊರೊನಾ ಸೋಂಕಿತರಾಗಿದ್ದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ಶುಕ್ರವಾರ ತೆರಳಿದ್ದಾರೆ.

ಜ್ವರದ ಲಕ್ಷಣಗಳು ಕಾಣಿಸಿಕೊಂಡ ಕಾರಣ ಅವರು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದರು. ಸೋಂಕಿತರಾಗಿರುವುದು ಸೆ.2ಕ್ಕೆ ದೃಢಪಟ್ಟಿತ್ತು. ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆದುಕೊಂಡಿದ್ದರು. ಈಗ ಅವರು ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋವಿಂದಯ್ಯ ಯತೀಶ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT